ರಾಜ್ಯಪಾಲರ ಭಾಷಣ: ಶೆಟ್ಟರ್‌ಗೆ ಪರಮ್ ಟಾಂಗ್
ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಪಾಲರ ಮೂಲಕ ಸುಳ್ಳು ಭಾಷಣ ಮಾಡಿಸಿದ್ದರೇ? ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ...

ಬೆಂಗಳೂರು: ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಪಾಲರ ಮೂಲಕ ಸುಳ್ಳು ಭಾಷಣ ಮಾಡಿಸಿದ್ದರೇ? ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಪ್ರಶ್ನಿಸಿದ್ದಾರೆ.
ರಾಜ್ಯಪಾಲರ ಭಾಷಣದಲ್ಲಿ ಮುನ್ನೋಟವಿಲ್ಲ. ಸರ್ಕಾರ ಸುಳ್ಳು ಭಾಷಣ ಮಾಡಿಸಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರತಿಪಕ್ಷಗಳು ಟೀಕಿಸಲೆಂದೇ ಟೀಕಿಸಬಾರದು.
ಇದರಿಂದ ಏನನ್ನೂ ಸಾಧಿಸುವಂತೆ ಆಗುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರು ಒಂದು ನೀತಿಯ ಆಧಾರದ ಮೇಲೆ ಸರ್ಕಾರದ ಸಾಧನೆಗಳನ್ನು ಹೇಳಿದ್ದಾರೆ. ಈ ಭಾಷಣದಲ್ಲಿ ನಮ್ಮ ಸಾಧನೆಗಳ ಅಂಶಗಳಿವೆ. ರಾಜ್ಯಪಾಲರ ಭಾಷಣವನ್ನು ಬಜೆಟ್ ರೀತಿ ಸ್ವೀಕರಿಸಲು ಸಾಧ್ಯವಿಲ್ಲ. ಮಂದಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಇನ್ನಷ್ಟು ಜನಪ್ರಿಯ ಯೋಜನೆಗಳನ್ನು ರಾಜ್ಯದ ಜನತೆಗೆ ನೀಡುತ್ತಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


