ಜಾಲ ತಾಣಗಳ ಮೇಲೆ ನಿಗಾ: ಅಧಿಕಾರಿಗಳಿಗೆ ದೆಹಲಿಯಲ್ಲಿ ತರಬೇತಿ
ಭಯೋತ್ಪಾದನೆ ಹಾಗೂ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಫೇಸ್‍ಬುಕ್, ಟ್ವಿಟರ್...

ಬೆಂಗಳೂರು: ಭಯೋತ್ಪಾದನೆ ಹಾಗೂ ಸಮಾಜಘಾತುಕ ಚಟುವಟಿಕೆಗಳ ಬಗ್ಗೆ ಚರ್ಚಿಸುವ ಫೇಸ್‍ಬುಕ್, ಟ್ವಿಟರ್ ಮುಂತಾದ ಜಾಲ ತಾಣಗಳ ಮೇಲೆ ನಿಗಾ ಇರಿಸಲು ನಗರ ಪೊಲೀಸರು ಆರಂಭಿಸುತ್ತಿರುವ ಪ್ರತ್ಯೇಕ ಘಟಕಕ್ಕೆ ನಿಯೋಜಿಸಲಾಗಿರುವ 15 ಅಧಿಕಾರಿಗಳ ತಂಡ ವಿಶೇಷ ತರಬೇತಿಗಾಗಿ ದೆಹಲಿಗೆ ತೆರಳಿದೆ.
ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಇಸಿಸ್ ಪರ ಒಲವು ಹೊಂದಿದ್ದ ಉಗ್ರ ಮೆಹ್ದಿ ಮಸ್ರೂರ್ ಬಿಸ್ವಾಸ್, ಇಸಿಸ್ ಸಂಘಟನೆಯ ಕಾರ್ಯಚಟುವಟಿಕೆ ಜಿಹಾದಿ ಸಂದೇಶಗಳನ್ನು ಟ್ವಿಟರ್ ಮೂಲಕ ಹರಿಬಿಟ್ಟು ಉಗ್ರವಾದಕ್ಕೆ ಪ್ರಚೋದನೆ ನೀಡುತ್ತಿದ್ದ. ಜನರನ್ನು ಇಸಿಸ್ ಸದಸ್ಯರನ್ನಾಗಿಸಲು ಸಾಮಾಜಿಕ ಜಾಲ ತಾಣ ಟ್ವಿಟರ್‍ಅನ್ನು ಅಸ್ತ್ರವಾಗಿ ಬಳಸಿಕೊಂಡಿದ್ದ.
ನಗರದಲ್ಲಿ ಇಂಥ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲ ತಾಣಗಳ ಮೇಲೆ ನಿಗಾ ಇರಿಸಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ. ಕಿಡಿಗೇಡಿಗಳು ಟ್ವಿಟರ್, ಫೇಸ್‍ಬುಕ್‍ನಲ್ಲಿ ಹರಿಬಿಡುವ ಪ್ರಚೋದನಕಾರಿ, ನಿಂದನೆಯ ಪೋಸ್ಟ್ ಗಳ ಮೇಲೆ ಒಂದು ತಂಡ ಸದಾ ಕಣ್ಗಾವಲಿರಿಸಲಿದೆ. ಈ ಸಂಬಂಧ ತರಬೇತಿ ಪಡೆಯಲು 15 ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಲಾಗಿದ್ದು, ತರಬೇತಿ ಪೂರ್ಣಗೊಳಿಸಿ ಶೀಘ್ರವೇ ನಗರಕ್ಕೆ ವಾಪಸಾಗಲಿದ್ದಾರೆ ಎಂದು ರೆಡ್ಡಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


