ಮಹಾಮಾರಿ ಹೆಚ್1ಎನ್1ಗೆ 12 ಬಲಿ
ರಾಜ್ಯದಲ್ಲಿ ಹೆಚ್1ಎನ್1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ..

ಬೆಂಗಳೂರು: ರಾಜ್ಯದಲ್ಲಿ ಹೆಚ್1ಎನ್1 ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, 12ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪ್ರಮುಖವಾಗಿ ಮಹಾನಗರಿ ಬೆಂಗಳೂರಿನಲ್ಲಿ ಸೋಂಕು ಹೆಚ್ಚು ವೇಗವಾಗಿ ಹರಡುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 75 ಜನರಿಗೆ ಸೋಂಕು ತಗುಲಿದೆ. ಅಲ್ಲದೆ ಈವರೆಗೂ ರಾಜ್ಯದ 144 ಮಂದಿಗೆ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಸಾಂಕ್ರಾಮಿಕ ರೋಗವಾಗಿರುವ ಹೆಚ್1ಎನ್1 ಬಗ್ಗೆ ಜನಸಾಮಾನ್ಯರಲ್ಲಿ ಹೆಚ್ಚಿನ ಅರಿವು ಇಲ್ಲದಿರುವುದು ರೋಗದ ತೀವ್ರತೆ ಹೆಚ್ಚಾಗಲು ಪ್ರಮುಖ ಕಾರಣ ಎಂದು ವೈಧ್ಯರು ಅಭಿಪ್ರಾಯಪಟ್ಟಿದ್ದಾರೆ.
ಆರೋಗ್ಯ ಇಲಾಖೆ ಅಂಕಿ-ಅಂಶಗಳ ಪ್ರಕಾರ, ಬೆಂಗಳೂರಲ್ಲೇ ಸುಮಾರು 25ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಉಡುಪಿ ಜಿಲ್ಲೆಯಲ್ಲಿ 7 ಮಂದಿ, ತುಮಕೂರಿನಲ್ಲಿ 7, ಚಿಕ್ಕಮಗಳೂರು, ದಾವಣಗೆರೆಯಲ್ಲಿ ತಲಾ 4, ಚಿತ್ರದುರ್ಗದಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ನಿನ್ನೆಯಿಂದೀಚೆಗೆ ಇನ್ನೂ ಇಬ್ಬರು ಸೋಂಕಿಗೆ ಬಲಿಯಾಗಿರುವ ವರದಿ ದೃಢಪಟ್ಟಿದ್ದು, ಬಿಬಿಎಂಪಿ ಕಾಲ್‌ಸೆಂಟರ್‌ಗೆ ಪ್ರತಿನಿತ್ಯ 15 ರಿಂದ 20 ಪ್ರಕರಣಗಳು ವರದಿಯಾಗುತ್ತಲೇ ಇವೆ. ರಾಜ್ಯಾದ್ಯಂತ ಹೊಸದಾಗಿ 25 ಮಂದಿಗೆ ಸೋಂಕಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


