ಟಾಟಾ ಏಸ್ ಪಲ್ಟಿ: 5 ಸಾವು
ಮದುವೆಗೆಂದು ಹೊರಟಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಐವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜೆಲ್ಲೆಯಲ್ಲಿ ಸಂಭವಿಸಿದೆ..

ದಾವಣಗೆರೆ: ಮದುವೆಗೆಂದು ಹೊರಟಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ಐವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜೆಲ್ಲೆಯಲ್ಲಿ ಸಂಭವಿಸಿದೆ.
ಟಾಟಾ ಏಸ್ ವಾಹನದಲ್ಲಿ ವಧುವನ್ನು ಬಳ್ಳಾರಿಗೆ ಕರೆದೊಯ್ಯುವ ವೇಳೆ ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದ ನಿಟ್ಟೂರು ಬಳಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಚಾಲಕ ಸೇರಿದಂತೆ ಒಟ್ಟು 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಇತರೆ 18 ಮಂದಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್ ವಧು ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕನ ಅತಿವೇಗ ಮತ್ತು ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಮೃತರನ್ನು ಚಾಲಕ ಶಮಿವುಲ್ಲಾ(28), ಲಕ್ಷಮ್ಮ(48), ಲಕ್ಷ್ಮಿದೇವಿ(55), ರಾಜಪ್ಪ(50), ರಾಮಕೃಷ್ಣ(40) ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ದಾವಣಗೆರೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸ್ಥಳಕ್ಕೆ ಎಸಿಪಿ ಬಾವಿಮನೆ, ಡಿವೈಎಸ್ಪಿ ನ್ಯಾಮೇಗೌಡ, ಇನ್‌ಸ್ಪೆಕ್ಟರ್ ಪಂಪಾಪತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


