ಜಿಲ್ಲಾ ಸುದ್ದಿ

ಕಾರು ಅಪಘಾತ ಚಾಲಕ ಸಾವು

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಚಾಲಕ ಸಂತೋಷ್...

ಕಾರು ಅಪಘಾತ ಚಾಲಕ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಚಾಲಕ ಸಂತೋಷ್ ಕುಮಾರ್(29) ಎಂಬುವರು ಮೃತಪಟ್ಟಿರುವ ಘಟನೆ ಯಲಹಂಕ ಮುಖ್ಯರಸ್ತೆಯಲ್ಲಿ ನಡೆದಿದೆ.

ಸುಬ್ರಮಣ್ಯಪುರ ನಿವಾಸಿಯಾಗಿರುವ ಸಂತೋಷ್, ಖಾಸಗಿ ಟ್ರಾವೆಲ್ಸ್ ಏಜೆನ್ಸಿಯಲ್ಲಿ ಚಾಲಕನಾಗಿದ್ದ. ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆ ತೆರಳುತ್ತಿದ್ದ.

ಯಲಹಂಕ ಮುಖ್ಯ ರಸ್ತೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಸಂತೋಷ್ ತಲೆಗೆ ತೀವ್ರ ಪೆಟ್ಟಾಗಿತ್ತು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.