ಜಿಲ್ಲಾ ಸುದ್ದಿ

ಮಹಿಳೆ ಮೇಲೆ ಅತ್ಯಾಚಾರ

ಮನೆಯಲ್ಲಿದ್ದ ವಿವಾಹಿತ ಮಹಿಳೆ ಮೇಲೆ ಪರಿಚಿತ ವ್ಯಕ್ತಿಯೇ ಅತ್ಯಾಚಾರ ಎಸಗಿರುವ ಘಟನೆ...

ಮಹಿಳೆ ಮೇಲೆ ಅತ್ಯಾಚಾರ
Published On :

ಬೆಂಗಳೂರು: ಮನೆಯಲ್ಲಿದ್ದ ವಿವಾಹಿತ ಮಹಿಳೆ ಮೇಲೆ ಪರಿಚಿತ ವ್ಯಕ್ತಿಯೇ ಅತ್ಯಾಚಾರ ಎಸಗಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ. ಇಲ್ಲಿನ ಪಿಳ್ಳಾರೆಡ್ಡಿ ನಗರದಲ್ಲಿ ಪತಿಯೊಂದಿಗೆ ವಾಸವಿದ್ದ ಉತ್ತರ ಪ್ರದೇಶ ಮೂಲದ 49 ವರ್ಷದ ಮಹಿಳೆ ನೊಂದವರು.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶ ಮೂಲದ ಎ.ಬಿ ಪಾಂಡೆ(39) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ನೊಂದ ಮಹಿಳೆಯ ಪತಿ ಪೀಠೋಪಕರಣ ತಯಾರಿಕೆ ಕಟ್ಟಿಗೆಗಳ ಪಾಲಿಶಿಂಗ್ ಮಾಡುತ್ತಾರೆ. ಆರೋಪಿ ಅದೇ ಕೆಲಸ ಮಾಡುತ್ತಿದ್ದು ಪರಸ್ಪರ ಪರಿಚಿತರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೋದ ನಂತರ ಮಹಿಳೆ ಒಬ್ಬರೇ ಮನೆಯಲ್ಲಿದ್ದರು.

ಈ ವೇಳೆ ಮನೆಗೆ ಬಂದ ಆರೋಪಿ ಪಾಂಡೆ, ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದ. ನೊಂದ ಮಹಿಳೆ ಪತಿಗೆ ಮಾಹಿತಿ ನೀಡಿದ್ದಳು. ಬಳಿಕ ದಂಪತಿ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.