18ರಿಂದ 22ರವರೆಗೆ ವೈಮಾನಿಕ ಪ್ರದರ್ಶನ
ಯಲಹಂಕ ವಾಯುನೆಲೆಯಲ್ಲಿ ಫೆ.18ರಿಂದ 22ರವೆರೆಗೆ ನಡೆಯುವ ಏರೋ ಇಂಡಿಯಾ ವೈಮಾನಿಕ...

ಪರ್ಯಾಯ ಮಾರ್ಗ ಬಳಸಲು ಸೂಚನೆ
ರಸ್ತೆ ಬದಿಗಳಲ್ಲಿ ವಾಹನ ನಿಲ್ಲಿಸದಂತೆ ಪೊಲೀಸರ ಮನವಿ
ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ.18ರಿಂದ 22ರವೆರೆಗೆ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿ ಕೆಲ ವಾಹನಗಳ ಸಂಚಾರ ನಿಷೇಧಿಸಿ ಮಾರ್ಗ ಬದಲಾವಣೆ ಮಾಡಲಾಗಿದೆ.
ಪ್ರದರ್ಶನಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗಣ್ಯರು ಮತ್ತು ಲಕ್ಷಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಹೀಗಾಗಿ, ಬಳ್ಳಾರಿ ರಸ್ತೆ ಮತ್ತು ಸುತ್ತಲಿನ ಎಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಿನ ಪ್ರಮಾಣದಲ್ಲಿ ಇರಲಿದ್ದು ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಏರೋ ಇಂಡಿಯಾ ಪ್ರದರ್ಶನದ ವೇಳೆ ಬಳ್ಳಾರಿ ರಸ್ತೆಯಲ್ಲಿ ಸಾರ್ವಜನಿಕರು ವೈಮಾನಿಕ ಪ್ರದರ್ಶನ ವೀಕ್ಷಿಸುವ ಉದ್ದೇಶದಿಂದ ವಾಹನಗಳನ್ನು ರಸ್ತೆ ಬದಿ ಹಾಗೂ ಎಲ್ಲೆಂದರಲ್ಲೇ ನಿಲ್ಲಿಸಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಅಲ್ಲದೇ ಅಂತಹ ವಾಹನಗಳನ್ನು ಟೋಯಿಂಗ್ ವಾಹನಗಳ ಮೂಲಕ ಎಳೆದೊಯ್ಯುವ ವೇಳೆ ವಾಹನಗಳಿಗೆ ಹಾನಿಯಾದರೆ ಪೊಲೀಸ್ ಇಲಾಖೆ ಹೊಣೆಯಲ್ಲ ಎಂದು ಸಂಚಾರ ಹಾಗೂ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ದಯಾನಂದ ಎಚ್ಚರಿಸಿದ್ದಾರೆ. 18ರ ಬೆಳಿಗ್ಗೆ 6ರಿಂದ 22ರ ರಾತ್ರಿ 8ರವೆರೆಗೆ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ `ಮೇಖ್ರಿ ವೃತ್ತದಿಂದ ಎಂಐಟಿ ಗೇಟ್'ವರೆಗೆ ಮತ್ತು `ಎಂಐಟಿ ಗೇಟ್‍ನಿಂದ ಮೇಖ್ರಿ ವೃತ್ತ'ದ ವರೆಗೆ ಹಾಗೂ ದೊಡ್ಡಬಳ್ಳಾಪುರ ರಸ್ತೆಯಲ್ಲಿ ಸಂತೆ ವೃತ್ತದಿಂದ ಉನ್ನಿಕೃಷ್ಣನ್ ಜಂಕ್ಷನ್‍ವರೆಗೆ ರಸ್ತೆಯ ಎರಡೂ ದಿಕ್ಕಿನಲ್ಲಿ ಸಂಚರಿಸುವ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ಸುಗಳ ಹೊರತುಪಡಿಸಿ ಲಾರಿ, ಟ್ರಕ್ ಇತರೆ ಸರಕು ಸಾಗಣೆಯ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


