126 ಪ್ರಕರಣ ಪತ್ತೆ, 99 ಆರೋಪಿಗಳ ಸೆರೆ
ನಗರದ ಪಶ್ಚಿಮ ವಿಭಾಗ ಪೊಲೀಸರು 126 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 99 ಆರೋಪಿಗಳನ್ನು ಬಂಧಿಸಿ ರು. 1.43 ಕೋಟಿ ಮೌಲ್ಯದ...

ಬೆಂಗಳೂರು: ನಗರದ ಪಶ್ಚಿಮ ವಿಭಾಗ ಪೊಲೀಸರು 126 ಅಪರಾಧ ಪ್ರಕರಣಗಳನ್ನು ಪತ್ತೆ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 99 ಆರೋಪಿಗಳನ್ನು ಬಂಧಿಸಿ ರು. 1.43 ಕೋಟಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಒಂದೂವರೆ ತಿಂಗಳಲ್ಲಿ ದಕ್ಷಿಣ ವಿಭಾಗದಲ್ಲಿ ದಾಖಲಾಗಿದ್ದ 4 ದರೋಡೆ, 8 ಸುಲಿಗೆ, 7 ಸರ ಅಪಹರಣ, 28 ಕನ್ನ ಕಳವು, 17 ಮನೆ ಕಳವು, 30 ದ್ವಿಚಕ್ರ ವಾಹನ ಕಳವು ಸೇರಿದಂತೆ ದಾಖಲಾಗಿದ್ದ ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಆರೋಪಿಗಳನ್ನು ಪತ್ತೆ ಮಾಡಲು ಶ್ರಮಿಸಿದ ವಿಜಯನಗರ, ಮಾಗಡಿ ರಸ್ತೆ, ಕಾಮಾಕ್ಷಿಪಾಳ್ಯ, ಬಸವೇಶ್ವರ ನಗರ, ಕೆ.ಪಿ.ಅಗ್ರಹಾರ, ಕೆಂಗೇರಿ, ಬ್ಯಾಟರಾಯನಪುರ, ಜ್ಞಾನಭಾರತಿ, ಚಂದ್ರಲೇಔಟ್, ರಾಜ ರಾಜೇಶ್ವರಿನಗರ, ಚಿಕ್ಕಪೇಟೆ, ಸಿಟಿ ಮಾರುಕಟ್ಟೆ, ಕಲಾಸಿಪಾಳ್ಯ, ಕಾಟನ್‍ಪೇಟೆ ಠಾಣೆ ಪೊಲೀಸರನ್ನು ಶ್ಲಾಘಿಸಿದರು.
ವಿಜಯನಗರ ಪೊಲೀಸರು ಕನ್ನಕಳವು ಮಾಡುತ್ತಿದ್ದ ನಾಗರಾಜ ಹಾಗೂ ಆತನ ಸಹಚರರನ್ನು ಬಂಧಿಸಿ ರು. 33,75 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


