ಜಿಲ್ಲಾ ಸುದ್ದಿ

ರಾಜಕೀಯ ವ್ಯಕ್ತಿಗಳ ನೇಮಕಕ್ಕೆ ಆಕ್ಷೇಪ

ಸಾಂಸ್ಕೃತಿಕ ಸಂಸ್ಥೆಗಳು ರಾಜಕೀಯ ನೇಮಕದ ಪುನರ್ವಸತಿ ಕೇಂದ್ರಗಳಾಗಬಾರದು ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ...

ರಾಜಕೀಯ ವ್ಯಕ್ತಿಗಳ ನೇಮಕಕ್ಕೆ ಆಕ್ಷೇಪ
ಪ್ರೊ.ಬರಗೂರು ರಾಮಚಂದ್ರಪ್ಪ
Published On :

ಬೆಂಗಳೂರು: ಸಾಂಸ್ಕೃತಿಕ ಸಂಸ್ಥೆಗಳು ರಾಜಕೀಯ ನೇಮಕದ ಪುನರ್ವಸತಿ ಕೇಂದ್ರಗಳಾಗಬಾರದು ಎಂದು ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಗಡಿನಾಡು ಅಭಿವೃದ್ಧಿ ಪ್ರಾಧಿಕಾರ, ಚಲನಚಿತ್ರ ಅಕಾಡೆಮಿ ಸೇರಿದಂತೆ ಸಾಂಸ್ಕೃತಿಕ ಸಂಸ್ಥೆಗಳ ಅಧ್ಯಕ್ಷರ ಅಧಿಕಾರಾವಧಿಯನ್ನು ಸರ್ಕಾರ 18 ತಿಂಗಳಿಗೆ ಮೊಟಕುಗೊಳಿಸಿದೆ. ಉಳಿದ ನಿಗಮ-ಮಂಡಳಿ ರೀತಿ ಇಂಥ ಸಂಸ್ಥೆಗಳಿಗೂ ರಾಜಕೀಯ ವ್ಯಕ್ತಿಗಳ ನೇಮಕವಾಗಬಾರದು ಎಂದರು.

ಅಧ್ಯಕ್ಷರ ನೇಮಕವಾದರೂ ಸದಸ್ಯರ ನೇಮಕ ಇನ್ನೂ ಆಗಿಲ್ಲ. ಹೀಗಾದರೆ ಪ್ರಜಾಸತಾತ್ಮಕ ವ್ಯವಸ್ಥೆಯಲ್ಲಿ ಸಂಸ್ಥೆಗಳು ಕೆಲಸ ಮಾಡುವುದಕ್ಕೆ ಕಷ್ಟವಾಗುತ್ತದೆ. ಇಂಥ ಸಂಸ್ಥೆಗಳನ್ನು ಖಾಲಿ ಇಡದಂತೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಬೇಕೆಂಬ ನಿಯಮವಿದೆ. ಇಲ್ಲವಾದರೆ ನಿಗದಿ ಮಾಡಿದ ಹಣ ಸದ್ಬಳಕೆಯಾಗುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಮಾತನಾಡಿ, ಗಡಿನಾಡಿನಲ್ಲಿ ಕನ್ನಡದ ಕೀರ್ತಿ ಎತ್ತಿ ಹಿಡಿದ ಕಯ್ಯಾರ ಕಿಂಜ್ಞಣ್ ರೈ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಕನ್ನಡದ ಹಬ್ಬವಾಗಿ ಸರ್ಕಾರ ಆಚರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.