ಬಿಡಿಎ ಕಡತ ಕದ್ದ ಮೂವರ ಬಂಧನ
ಕಚೇರಿಯಲ್ಲಿರಬೇಕಾದ ಬಿಡಿಎ ಕಡತಗಳನ್ನು ಕದ್ದು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ ಮೂವರು ಮಧ್ಯವರ್ತಿಗಳನ್ನು ಬಿಡಿಎ ಪೊಲೀಸರು ಮಧ್ಯ ವರ್ತಿಗಳನ್ನು...

ಬೆಂಗಳೂರು: ಕಚೇರಿಯಲ್ಲಿರಬೇಕಾದ ಬಿಡಿಎ ಕಡತಗಳನ್ನು ಕದ್ದು ತಮ್ಮ ವಶದಲ್ಲಿ ಇಟ್ಟುಕೊಂಡಿದ್ದ ಮೂವರು ಮಧ್ಯವರ್ತಿಗಳನ್ನು ಬಿಡಿಎ ಪೊಲೀಸರು ಮಧ್ಯ ವರ್ತಿಗಳನ್ನು ಬಿಡಿಎ ಪೊಲೀಸರು ಬಂಧಿಸಿ ಸೈಟ್‌ವೊಂದರ ಕಡತವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಧ್ಯವರ್ತಿಗಳಾದ ಲಕ್ಷ್ಮಣ, ರವಿ ಹಾಗೂ ಶ್ರೀನಿವಾಸ್ ಬಂಧಿತರು. ಈ ಸಂಬಂಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬನಶಂಕರಿ 2ನೇ ಹಂತ ಹೊಸಕೆರೆ ಹಳ್ಳಿಯಲ್ಲಿರುವ ಸೈಟ್ ಸಂಖ್ಯೆ 202 ಬಿ.ಸಿ ಭಾರತಿ ಎಂಬುವರಿಗೆ ಸೇರಿದ್ದಾಗಿದ್ದು ಸೈಟ್‌ನ ಕಡತವನ್ನು ಬಿಡಿಎ ಸೈಟ್ ಮಂಜೂರು ವಿಭಾಗದಿಂದ ಬುಧವಾರ ಸಂಜೆ 4.30ರ ಸುಮಾರಿಗೆ ಆರೋಪಿಗಳು ಕದ್ದು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಈ ಬಗ್ಗೆ ಸಿಕ್ಕ ಮಾಹಿತಿ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಮುಂದಿನ ತನಿಖೆಗಾಗಿ ನೀಡಲಾಗಿದೆ ಎಂದು ಬಿಡಿಎ ಎಸ್ಪಿ ಜಿತೇಂದ್ರನಾಥ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


