ಸಹಜ ಸ್ಥಿತಿಯತ್ತ ಶಿವಮೊಗ್ಗ
ಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು...

ಶಿವಮೊಗ್ಗ: ಗಲಭೆಯಿಂದ ತತ್ತರಿಸಿದ್ದ ಶಿವಮೊಗ್ಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬೆಳಗಿನ ವೇಳೆ ಅಂಗಡಿ ಮುಂಗಟ್ಟುಗಳು ತೆರೆದಿದ್ದು ವಹಿವಾಟು ಎಂದಿನಂತೆಯೇ ಇತ್ತು. ಭಾನುವಾರದ್ದರಿಂದ ಮಧ್ಯಾಹ್ನದ ನಂತರ ಮುಚ್ಚಿದ್ದವು. ಬಸ್ ಆಟೋ ಸಂಚಾರ ಎಂದಿನಂತಿತ್ತು. ಔಷಧಾಲಯ, ಆಸ್ಪತ್ರೆ, ಹಾಲು ಸೇರಿದಂತೆ ಜನಜೀವನಕ್ಕೆ ತುರ್ತು ಅಗತ್ಯವಿದ್ದ ವಸ್ತುಗಳಿಗೆ ಯಾವುದೇ ತಡೆಯಾಗಲಿಲ್ಲ. ನಾಗರಿಕರು ಸಹ ಮಾಮೂಲಿ ಜೀವನಕ್ಕೆ ಮರಳಿದ್ದರು. ಸಂಜೆ ವಿನೋಬನಗರದ 100 ಅಡಿ ರಸ್ತೆಯಲ್ಲಿ ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಹಚ್ಚಿದ್ದ ಬೆಂಕಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ನಂದಿಸಿದರು.
ಅದನ್ನು ಹೊರತುಪಡಿಸಿ ಶನಿವಾರ ಸಂಜೆ ನಂತರ ಅಹಿತಕರ ಘಟನೆಗಳು ನಡೆದಿಲ್ಲ. ಶನಿವಾರ ರಾತ್ರಿ ನಗರಾದ್ಯಂತ ಕಾರ್ಯಾಚರಣೆ ನಡೆಸಿದ ಪೊಲೀಸರು 100ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


