ಬಿಬಿಎಂಪಿ ಹಗರಣ: ಎಫ್ ಐಆರ್ ರದ್ದು ಕೋರಿಕೆ ಅರ್ಜಿ ವಜಾ
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರು.1500ಕೋಟಿಗೂ ಅಧಿಕ ಮೊತ್ತದ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ...

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರು.1500ಕೋಟಿಗೂ ಅಧಿಕ ಮೊತ್ತದ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರಾಜರಾಜೇಶ್ವರಿನಗರ, ಮಲ್ಲೇಶ್ವರ ಮತ್ತು ಗಾಂಧಿನಗರ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಹಲವು ಕಾಮಗಾರಿ ನವೀಕರಣದಲ್ಲಿ ಹಗರಣದ ವಾಸನೆ ಬಡಿದ ಹಿನ್ನೆಲೆಯಲ್ಲಿ ಬಿಎಂಟಿಎಸಿ ಎಫ್ ಐಆರ್ ದಾಖಲಿಸಿಕೊಂಡಿತ್ತು. ಬಿಎಂಟಿಎಸಿ ದಾಖಲಿಸಿದ್ದ ಎಫ್ ಐಆರ್ ರದ್ದು ಪಡಿಸುವಂತೆ ಕೋರಿ ಬಿಬಿಎಂಪಿಯ ಕಾರ್ಯನಿರ್ವಾಹಕ ಎಂಜಿನಿಯರ್ ಬಿ.ಜಿ.ಪ್ರಕಾಶ್ ಸೇರಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ಈ ಹಿಂದೆ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇವರೆಲ್ಲರೂ ಮೇಲ್ಮನವಿ ಅರ್ಜಿ ದಾಖಲಿಸಿದ್ದರು. ಬಿಎಂಟಿಎಸಿಗೆ ಎಫ್ಐಆರ್ ದಾಖಲಿಸಿಕೊಳ್ಳುವ ಅಧಿಕಾರವಿಲ್ಲ. ಅಲ್ಲದೇ ತಾವೆಲ್ಲರೂ ಅಧಿಕಾರಿಗಳಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿದ್ದೇವೆ. ತಮ್ಮ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಬೇಕಾದ್ದಲ್ಲಿ, ಪೂರ್ವಾನುಮತಿ ಪಡೆದುಕೊಳ್ಳಬೇಕು. ಹೀಗಾಗಿ ಎಫ್ಐಆರ್ ವಜಾಗೊಳಿಸುವಂತೆ ಕೋರಿದ್ದರು.
ವಿಚಾರಣೆ ನಡೆಸಿದ್ದ ಮುಖ್ಯ ನ್ಯಾ.ಡಿ.ಎಚ್.ವಘೇಲಾ ಮತ್ತು ನ್ಯಾ. ಅಶೋಕ್ ಬಿ ಹಿಂಚಿಗೇರಿ ಅವರಿದ್ದ ವಿಭಾಗೀಯ ಪೀಠ, ಈ ಹಂತದಲ್ಲಿ ಪೂರ್ವಾನುಮತಿ ಪಡೆದುಕೊಳ್ಳಬೇಕು ಎಂಬ ವಾದ ಒಪ್ಪಲು ಸಾಧ್ಯವಿಲ್ಲ. ಅಲ್ಲದೇ ಸಿಆರ್‍ಪಿಸಿ 482ರ ಅನ್ವಯ ಮೇಲ್ಮನವಿ ರಿಟ್ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ತಾಂತ್ರಿಕ ಕಾರಣದಿಂದ ಅರ್ಜಿಯನ್ನು ವಜಾಗೊಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


