ಉಗ್ರಪ್ಪ ಸೇರಿ ಪರಿಷತ್‍ನ 4 ಸದಸ್ಯರಿಗೆ ನೋಟಿಸ್
ವಿಧಾನ ಪರಿಷತ್‍ಗೆ ನಾಮ ನಿರ್ದೇಶನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಿಷತ್‍ನ ನಾಲ್ವರು ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ...

ಬೆಂಗಳೂರು: ವಿಧಾನ ಪರಿಷತ್‍ಗೆ ನಾಮ ನಿರ್ದೇಶನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಪರಿಷತ್‍ನ ನಾಲ್ವರು ಸದಸ್ಯರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಾಮಾಜಿಕ, ಕಲೆ, ಸಾಹಿತ್ಯದಂತಹ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಮಾತ್ರ ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಬೇಕು. ಆದರೆ ಈ ನಿಯಮ ಉಲ್ಲಂಘಿಸಿ ರಾಜಕಾರಣಿಗಳನ್ನು ನಾಮನಿರ್ದೇಶನ ಮಾಡಿದ್ದಾರೆಂದು ಆರೋಪಿಸಿ ಮಾಜಿ ಸಂಸದ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಪಿ. ಕೋದಂಡರಾಮಯ್ಯ ಹೈಕೋರ್ಟ್ನಲ್ಲಿ ಅರ್ಜಿ ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾ.ಅಬ್ದುಲ್ ನಜೀರ್ ಅವರ ಪೀಠ, ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಅಬ್ದುಲ್ ಜಬ್ಬಾರ್, ಐವಾನ್ ಡಿ ಸೋಜಾ ಮತ್ತು ಇಕ್ಬಾಲ್ ಅಹಮದ್ ಸರಡಗಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಸಂವಿಧಾನದ 171(5)ವಿಧಿ ಪ್ರಕಾರ, ಸಾಹಿತ್ಯ, ಕಲೆ, ವಿಜ್ಞಾನದಂತಹ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದವರನ್ನು ಪರಿಷತ್ ಸ್ಥಾನಕ್ಕೆ ನಾಮ ನಿರ್ದೇಶನ ಮಾಡಬೇಕು. ಆದರೆ ಪಕ್ಷದ ನಿಷ್ಠಾವಂತರನ್ನು ಮತ್ತು ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿ ಕೊಂಡವರನ್ನು ನಾಮ ನಿರ್ದೇಶನ ಮಾಡುವ ಮೂಲಕ ಸಂವಿಧಾನದ ನಿಯಮ ಉಲ್ಲಂಘನೆ ಮಾಡಲಾಗಿದೆ. ಆದ್ದರಿಂದ ಕೂಡಲೇ ಈ ನಾಲ್ವರು ಪರಿಷತ್ ಸ್ಥಾನದಲ್ಲಿ ಮುಂದು ವರಿಯದಂತೆ ನಿರ್ದೇಶಿಸಬೇಕೆಂದು ಅರ್ಜಿದಾರರು ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ನಾಲ್ವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


