ಅನುದಾನ ದುರ್ಬಳಕೆ ವಿರೋಧಿಸಿ ಪ್ರತಿಭಟನೆ
ಸೂರು ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಹಣವನ್ನು ವಿಜಯನಗರ ವಿಭಾಗದ ಎಂಜಿನಿಯರ್‍ಗಳು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಮತ್ತು ಮೈನಾರಿಟಿ ಸೇನೆ ಸಂಘಟನೆ ಕಾರ್ಯಕರ್ತರು ಸೋಮವಾರ ಬಿಬಿಎಂಪಿ ಕೇಂದ್ರ...

ಬೆಂಗಳೂರು: ಸೂರು ಯೋಜನೆಯಡಿ ಬಿಡುಗಡೆಯಾಗಿದ್ದ ಅನುದಾನದ ಹಣವನ್ನು ವಿಜಯನಗರ ವಿಭಾಗದ ಎಂಜಿನಿಯರ್‍ಗಳು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಮತ್ತು ಮೈನಾರಿಟಿ ಸೇನೆ ಸಂಘಟನೆ ಕಾರ್ಯಕರ್ತರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಪಾಲಿಕೆಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ವಿಜಯನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹಾಗೂ ವಾರ್ಡ್ 134ರ ಸಹಾಯಕ ಎಂಜಿನಿಯರ್ ರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಬೆಂಗಳೂರು ಜಿಲ್ಲಾ ಯುವಘಟಕದ ಅಧ್ಯಕ್ಷ ರಂಗಸ್ವಾಮಿ ಆಗ್ರಹಿಸಿದರು. ರಾಜಕಾಲುವೆಯ ಪಕ್ಕದಲ್ಲೇ 33 ನಿವೇಶನಗಳಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮನೆಗಳು ವಾಸಕ್ಕೆ ಯೋಗ್ಯವಿಲ್ಲ. ಈಗಾಗಲೇ 6 ಅಡಿ ಅಗಲ, 7 ಅಡಿ ಉದ್ದದ 14 ಮನೆಗಳನ್ನು ನಿರ್ಮಾಣ ಮಾಡಿದ್ದಾರೆ. ಆದರೆ ಫಲಾನುಭವಿಗಳಿಗೆ ಕಾರ್ಯಾದೇಶ ಪ್ರತಿಯನ್ನು ನೀಡಲು ಅಲೆದಾಡಿಸುತ್ತಿದ್ದಾರೆ. ಯಾವುದೇ ದಾಖಲೆಗಳಿಲ್ಲದೆ ರಾಜಕಾಲುವೆ ಪಕ್ಕದಲ್ಲಿ ಮನೆ ನಿರ್ಮಾಣ ಕಾನೂನು ಬಾಹಿರ.
ಈ ಸಂಬಂಧ ಹಾಲಿ ಸದಸ್ಯ ಹಾಗೂ ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷರಾಗಿರುವ ಟಿ.ವಿ. ಕೃಷ್ಣ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಲಿಲ್ಲ ಎಂದು ಅವರು ದೂರಿದರು. ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


