ಜಿಲ್ಲಾ ಸುದ್ದಿ

ಭೀಕರ ರಸ್ತೆ ಅಪಘಾತ: 6 ಸಾವು

ಭೀಕರ ರಸ್ತೆ ಅಪಘಾತ: 6 ಸಾವು
ಅಪಘಾತ
Published On :

ಬಸವನಬಾಗೇವಾಡಿ(ವಿಜಯಪುರ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಟ್ರ್ಯಾಕ್ಟರ್‌ವೊಂದಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದುರ್ಮರಣ ಹೊಂದಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗೋಳಸಂಗಿ ಬಳಿಯ ಈ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.