ಜಂಟಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ

ಬೆಂಗಳೂರು: ಇಸಿಸ್ ಪರ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಶಂಕಿತ ಉಗ್ರ ಮೆಹ್ದಿ ಪ್ರಕರಣದ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ನಿಂಬಾಳ್ಕರ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಪ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಚಂದ್ರಶೇಖರ್.ಎಂ ಅವರನ್ನು ನಿಯೋಜಿಸಲಾಗಿದೆ. ಇನ್ನು ಮಾನವ ಹಕ್ಕುಗಳ ವಿಭಾಗದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಮಲ್ ಪಂತ್ ಅವರನ್ನು ಬೆಂಗಳೂರು ಕಾರಾಗೃಹ ಅಡಿಷನಲ್ ಡಿಜಿಪಿಯಾಗಿ ನಿಯೋಜಿಸಲಾಗಿದೆ.
ಆ ಸ್ಥಾನದಲ್ಲಿದ್ದ ಗಗನ್ ದೀಪ್ ಅವರ ಮೇಲೆ ಕೆಲ ಗಂಭೀರ ಆರೋಪಗಳು ಬಂದ ಹಿನ್ನಲೆಯಲ್ಲಿ ಅವರಿಗೆ ತಾತ್ಕಾಲಿಕ ರಜೆ ನೀಡಲಾಗಿದೆ. ಪರಪ್ಪನ ಅಗ್ರಹಾರದಲ್ಲಿನ ಜೈಲುಗಳಿಗೆ ಕೈದಿಗಳಿಗೆ ಬೇಕಾದ ವಸ್ತುಗಳು ಯಾವುದೇ ತಡೆಯಿಲ್ಲದೇ ರವಾನೆಯಾಗುತ್ತಿದ್ದರೂ ಗಗನ್‌ದೀಪ್ ಅವರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು.
ಜಂಟಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಂಕಿತ ಉಗ್ರ ಮೆಹ್ದಿ ಮಸ್ರೂರ್ ಬಿಸ್ವಾಸ್ ಪ್ರಕರಣದ ಆರಂಭಿಕ ದಿನದಿಂದಲೂ ವಿಚಾರಣೆ ನಡೆಸುತ್ತಿದ್ದು, ಅವರ ದಿಢೀರ್ ವರ್ಗಾವಣೆ ಸಾಕಷ್ಟು ಅನುಮಾನಗಳನ್ನು ಹುಟ್ಟಿಹಾಕಿವೆ. ವಿಚಾರಣೆಯಲ್ಲಿ ಸ್ಫೋಟಕ ಅಂಶಗಳು ಪತ್ತೆಯಾಗುತ್ತಿರುವ ಈ ವೇಳೆಯಲ್ಲಿ ನಿಂಬಾಳ್ಕರ್ ಅವರ ದಿಡೀರ್ ಎತ್ತಂಗಡಿ ಏಕೆ ಎಂಬ ಅನುಮಾನಗಳು ಮೂಡುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


