ವ್ಯವಸ್ಥೆ ಬದಲಿಸಲು ಆಗದ ಸರ್ಕಾರ ಏಕೆ ಬೇಕು: ಕಾಗೋಡು
ವ್ಯವಸ್ಥೆಯನ್ನು ಬದಲಾಯಿಸುವ ಕಾರಣಕ್ಕಾಗಿಯೇ ಜನರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ...

ಬೆಂಗಳೂರು: ವ್ಯವಸ್ಥೆಯನ್ನು ಬದಲಾಯಿಸುವ ಕಾರಣಕ್ಕಾಗಿಯೇ ಜನರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಬದಲವಾಣೆಯಾಗದಿದ್ದರೆ ಸರ್ಕಾರ ಯಾಕಿರಬೇಕು ಎಂದು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದರು.
ಸ್ಪೀಕರ್ ಹುದ್ದೆಗೆ ಬಂದ ನಂತರ ವ್ಯವಸ್ಥೆಯನ್ನು ಸರಿಪಡಿಸಲು ಯತ್ನಿಸುತ್ತಿದ್ದೇನೆ. ಹಳೆಯ ಕೊಳಕು ವ್ಯವಸ್ಥೆಯನ್ನು ಬದಲಿಸಲು ಜನರು ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದಾರೆ. ರಾಜ್ಯದಲ್ಲಿ ವೈದ್ಯರ ಹಾಗೂ ವೈದ್ಯಕೀಯ ಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ.
ಇದನ್ನು ಪರಿಹರಿಸುವ ಕೆಲಸವನ್ನು ಸರ್ಕಾರವೇ ಮಾಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳು ಸಾರ್ವಭೌಮರಂತೆ ವರ್ತಿಸುತ್ತಿದ್ದು, ಸರ್ಕಾರ ಮಾಡಿದ ಕಾನೂನನ್ನು ಜಾರಿಗೊಳಿಸುತ್ತಿಲ್ಲ. ನಿಯಮ ಹಾಗೂ ಶಾಸನಗಳನ್ನು ರೂಪಿಸಲೆಂದೇ ಶಾಸನಸಭೆ ಇದೆ. ಆದರೆ ಕಾನೂನು ಜಾರಿಮಾಡುವಲ್ಲಿ ಅರಣ್ಯ ಇಲಾಖೆ ಸರ್ಕಾರವನ್ನು ಪರಿಗಣಿಸುತ್ತಿಲ್ಲ.
ಕಾನೂನಿನಲ್ಲಿ ತಪ್ಪಿದ್ದರೆ ನ್ಯಾಯಾಲಯಕ್ಕೆ ತಿಳಿಸಬೇಕು. ಕಾನೂನಿನ ದೋಷಗಳನ್ನು ತಿಳಿಸದೆ ಭೂಮಿ ವಶಪಡಿಸಿಕೊಂಡು ರೈತರನ್ನು ಒಕ್ಕಲೆಬ್ಬಿಸುವುದು ಸರಿಯಲ್ಲ ಎಂದು ಭಾನುವಾರ ಸುದ್ದಿಗಾರರೊಂದಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ನೀಡಿದ ನಂತರ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕ ಮಂಡಿಸಲಾಗಿದೆ. ಸಾರ್ವಜನಿಕರ ಅಭಿಪ್ರಾಯವನ್ನು ಎದುರಿಸಲು ಸಾಧ್ಯವಾಗದಿದ್ದರೆ ವಿಧೇಯಕವನ್ನು ಮರಳಿ ಪಡೆಯಲು ಆವಕಾಶವಿದೆ. ಇದು ಸರ್ಕಾರದ ಇಚ್ಛೆಗೆ ಬಿಟ್ಟಿದ್ದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


