ಪಶುವೈದ್ಯ ಆಸ್ಪತ್ರೆ ಸ್ಥಳಾಂತರಕ್ಕೆ ಹೈಕೋರ್ಟ್ ಸಮ್ಮತಿ
ಸರ್ಕಾರದ ನಿಲುವಿಗೆ ಹೈಕೋರ್ಟ್ ಹಸಿರು ನಿಶಾನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆಲ ಪಶುವೈದ್ಯ ಆಸ್ಪತ್ರೆಗಳನ್ನು ಗ್ರಾಮೀಣ ಭಾಗಕ್ಕೆ ಸ್ಥಳಾಂತರಕ್ಕೆ ತೀರ್ಮಾನಿಸಿದ ಸರ್ಕಾರದ ನಿಲುವಿಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ.
ನಗರ ಭಾಗದಲ್ಲಿ ಅಗತ್ಯವಿರುವ ಜಾನುವಾರುಗಳಿಗೆ ಸಂಚಾರಿ ವಾಹನ ವ್ಯವಸ್ಥೆಯ ಮೂಲಕ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಹಿನ್ನೆಲೆಯಲ್ಲಿ ಸ್ಥಳಾಂತರಕ್ಕೆ ಅನುಮತಿ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯ 30 ಪಶುವೈದ್ಯ ಆಸ್ಪತ್ರೆ ಗ್ರಾಮೀಣ ಭಾಗಕ್ಕೆ ಸ್ಥಳಾಂತರಿಸಲು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬೆಂಗಳೂರು ಗೋಪಾಲಕರ ಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪ್ರಮಾಣಪತ್ರ ಸಲ್ಲಿಸಿ 'ನಗದಲ್ಲಿರುವ ಜಾನುವಾರುಗಳಿಗೆ ಅಗತ್ಯವಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಹೆಚ್ಚುವರಿ ಪಶುವೈದ್ಯಕೀಯ ಆಸ್ಪತ್ರೆಗಳನ್ನು ಗ್ರಾಮೀಣ ಪ್ರದೇಶಗಳಿಗೆ ಸ್ಥಳಾಂತರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ಇದೀಗ ನಗರದಲ್ಲಿ ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಲು ಸಂಚಾರಿ ಕೇಂದ್ರ ಪ್ರಾರಂಭಿಸಲಾಗುವುದು.
ಆ ಮೂಲಕ ಮನೆ-ಮನೆಗೆ ಪಶು ವೈದ್ಯಕೀಯ ಸೇವೆ ಕಲ್ಪಿಸಲಾಗುವುದು' ಎಂದು ಪೀಠಕ್ಕೆ ತಿಳಿಸಿದರು.
ಇದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ನ್ಯಾ.ರಾಮಮೋಹನ ರೆಡ್ಡಿ ಅವರಿದ್ದ ವಿಭಾಗೀಯ ಪೀಠ, ನಗರದಲ್ಲಿರುವ ಜಾನುವಾರುಗಳಿಗೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸುವ ವ್ಯವಸ್ಥೆಯನ್ನು ಸರ್ಕಾರ ಮುಂದುವರೆಸಲಿದೆ. ಎಂದು ಭರವಸೆ ವ್ಯಕ್ತಪಡಿಸಿ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


