ಖಾಸಗಿ ಶಾಲೆಗಳ ಅನುದಾನಕ್ಕೆ ಆಗ್ರಹ
ಅನುದಾನ ರಹಿತ ಖಾಸಗಿ ಶಾಲೆಗಳನ್ನು ಈಗಾಗಲೇ ವೇತನಾನುದಾನಕ್ಕೆ ಒಳಪಡಿಸಲಾಗಿದೆ...

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿರುವ 108ಕ್ಕೂ ಹೆಚ್ಚು ಅನುದಾನರಹಿತ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವಲ್ಲಿ ಸರ್ಕಾರ ವಿಳಂಭ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ಅನುದಾನರಹಿತ ಖಾಸಗಿ ಶಾಲಾ ಕಾಲೇಜು ಶಿಕ್ಷಕರ ಹಕ್ಕುಗಳ ಹೋರಾಟ ಸಮಿತಿ ಆರೋಪಿಸಿದೆ.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಮಿತಿ ಅಧ್ಯಕ್ಷ ಪಿ.ಲೋಕೇಶ್, ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲ ಅನುದಾನ ರಹಿತ ಖಾಸಗಿ ಶಾಲೆಗಳನ್ನು ಈಗಾಗಲೇ ವೇತನಾನುದಾನಕ್ಕೆ ಒಳಪಡಿಸಲಾಗಿದೆ.
ಆದರೆ, ಕೆಲವು ಕಾರಣಗಳಿಂದ ರಾಜ್ಯದ 108ಕ್ಕೂ ಹೆಚ್ಚು ಶಾಲೆಗಳು ಅನುದಾನಕ್ಕೆ ಒಳಪಟ್ಟಿಲ್ಲ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಕಚೇರಿಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ವಿಲೇವಾರಿಯಾಗದ ಪ್ರಸ್ತಾವನೆಯ ಕಡತಗಳು ಶಿಕ್ಷಣ ಇಲಾಖೆಗೆ ವಾಪಸಾಗಿವೆ. ಇದು ಸರ್ಕಾರದ ವಿಳಂಭ ಧೋರಣೆಗೆ ಸಾಕ್ಷಿ ಎಂದರು.
ಕಳೆದ 20 ವರ್ಷಗಲ ಕಾಲ ಕನ್ನಡ ಮಾಧ್ಯಮದಲ್ಲಿ ನಡೆದುಕೊಂಡು ಬಂದಿರುವ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅನುದಾನ ನೀಡಲಾಗಿದೆ. ಉಳಿದ 108 ಶಾಲೆಗಳಿಗೆ ಕಳೆದ ಎರಡು ವರ್ಷಗಳಿಂದ ಅನುದಾನ ನೀಡದೇ ನಿರ್ಲಕ್ಷಿಸಲಾಗಿದೆ.
ಹೊಸದಾಗಿ ಅನುದಾನ ನೀಡುವಂತೆ ಸರ್ಕಾರವನ್ನು ಕೇಳಿಲ್ಲ. ಕನ್ನಡ ಶಾಲೆಗಳಿಗೆ 2007ರಲ್ಲಿ ಮಂಜೂರಾದ ಅನುದಾನವನ್ನು ಬಿಡುಗಡೆಗೊಳಿಸಿ ಎಂದು ಮನವಿ ಮಾಡುತ್ತಿದ್ದೇವೆ. ಈ ಸಂಬಂಧ ಸರ್ಕಾರ ಇನ್ನಾದರೂ ಗಮನಹರಿಸದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಮಿತಿ ಸಂಚಾಲಕರಾದ ಬಿ.ಎಚ್.ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


