ಜಿಲ್ಲಾ ಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರ ದುರ್ಮರಣ

ಇನ್ನು ಒಂದು ಗಂಟೆ ಪ್ರಯಾಣಿಸಿದ್ದರೆ ಅವರು ಮನೆ ತಲುಪುತ್ತಿದ್ದರು. ಆದರೆ ವಿಧಿಯಾಟ ಬೇರೆಯಾಗಿತ್ತು...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರ ದುರ್ಮರಣ
ಲಾರಿಗೆ ಕಾರು ಡಿಕ್ಕಿ(ಸಾಂದರ್ಭಿಕ ಚಿತ್ರ)
Published On :

ಚಾಮರಾಜನಗರ: ಇನ್ನು ಒಂದು ಗಂಟೆ ಪ್ರಯಾಣಿಸಿದ್ದರೆ ಅವರು ಮನೆ ತಲುಪುತ್ತಿದ್ದರು. ಆದರೆ ವಿಧಿಯಾಟ ಬೇರೆಯಾಗಿತ್ತು. ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಬಾರದ ಲೋಕಕ್ಕೆ ಹೋಗಿದ್ದಾರೆ.

ಇಂದು ಬೆಳಗ್ಗೆ ಚಾಮರಾಜನಗರ ತಾಲೂಕಿನ ಚಿಕ್ಕೊಳೆ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಮೃತರನ್ನು ಮೈಸೂರು ಮೂಲದ 36 ವರ್ಷದ ಶ್ರೇಯಸ್, 52 ವರ್ಷದ ಚಿದಾನಂದ ಹಾಗೂ 64 ವರ್ಷದ ಸಿದ್ಧರಾಜು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಮಿಳುನಾಡಿಗೆ ತೆರಳಿದ್ದವರು ಇಂದು ಮೈಸೂರಿಗೆ ಆಗಮಿಸುತ್ತಿದ್ದರು. ರಾಮಸಮುದ್ರದ ಚಿಕ್ಕೊಳೆ ಬಳಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ರಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.