ಕೆಪಿಎಸ್‌ಸಿ ನೇಮಕ: ಹೈಕೋರ್ಟ್‌ನಲ್ಲಿ ಪಿಐಎಲ್
ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕೆಪಿಎಸ್‌ಸಿಗೆ ಹೊಸ ಸಮಸ್ಯೆಯೊಂದು ತಳಕು ಹಾಕಿಕೊಂಡಿದೆ...

ಬೆಂಗಳೂರು: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಲ್ಲಿರುವ ಕೆಪಿಎಸ್‌ಸಿಗೆ ಹೊಸ ಸಮಸ್ಯೆಯೊಂದು ತಳಕು ಹಾಕಿಕೊಂಡಿದೆ. ಅಧ್ಯಕ್ಷ ಮತ್ತು ಏಳು ಮಂದಿ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವನ್ನೇ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಲಾಗಿದೆ.
ರಾಜ್ಯಪಾಲರನ್ನೇ ಪ್ರತಿವಾದಿಯನ್ನಾಗಿ ಮಾಡಬೇಕು ಎಂಬ ಅರ್ಜಿದಾರರ ಮನನಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ಮತ್ತು ನ್ಯಾ. ರಾಮಮೋಹನ ರೆಡ್ಡಿ ಅವರಿದ್ದ ದ್ವಿಸದಸ್ಯ ಪೀಠ, ಅವರ ಕಚೇರಿಯನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.
ಸಂಪುಟದ ನಿರ್ಧಾರವೇನು?
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಹಾಗೂ ಸದಸ್ಯ ಸ್ಥಾನಕ್ಕೆ ಡಾ. ನಾಗಬಾಯಿ ಬಿ. ಬುಲ್ಲಾ, ಡಾ.ರವಿಕುಮಾರ್, ಸೈಯದ್ ಉಲ್ತಾಫ್ ಹುಸೇನ್, ರಘುನಂದನ್ ರಾಮಣ್ಣ, ಪ್ರೊ. ಎಚ್ ಗೋವಿಂದಯ್ಯ, ಮೃತ್ಯುಂಜಯ ಮತ್ತು ಮೈಕಲ್ ಸೈಮನ್ ಬಾರೆಟ್ಟೂ ಅವರ ಹೆಸರನ್ನು ನಾಮನಿರ್ದೇಶನ ಮಾಡಲು ತೀರ್ಮಾನಿಸಲಾಗಿತ್ತು.
ಅರ್ಜಿದಾರರ ಮನವಿ?
- ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕ ವಿಚಾರದಲ್ಲಿ ಸರ್ಕಾರ ಮತ್ತು ರಾಜ್ಯಪಾಲರು ಸೂಕ್ತ ಮಾರ್ಗಸೂಚಿ ಹೊರಡಿಸಬೇಕು.
- ಮಾರ್ಗಸೂಚಿ ರಚನೆಯಾಗುವವರೆಗೂ ಸರ್ಕಾರ ಶಿಫಾರಸು ಮಾಡಿರುವ ಹೆಸರುಗಳನ್ನು ತಡೆಯುವಂತೆ ರಾಜ್ಯಪಾಲರಿಗೆ ಆದೇಶಿಸಬೇಕು.
- ಸುಪ್ರೀಂ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ಗಳ ಆದೇಶದಂತೆ ಮಾರ್ಗಸೂಚಿ ನಿಯಮಾವಳಿ ರಚನೆಗೆ ರಾಜ್ಯಪಾಲರಿಗೆ ಸೂಚಿಸಬೇಕು.
- ಕೆಪಿಎಸ್‌ಸಿ ಪದಾಧಿಕಾರಿಗಳ ನೇಮಕ ಮಾಡುವಾಗ ಲೋಕಾಯುಕ್ತರಿಗೆ ಸಮನಾದ ವಿಚಕ್ಷಣ ದಳಕ್ಕೆ ಪಟ್ಟಿ ನೀಡಿ ಒಪ್ಪಿಗೆ ಪಡೆಯಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


