ಹನ್ನೊಂದು ಲಕ್ಷ ಮಕ್ಕಳಿಗೆ ಪೋಲಿಯೊ ಹನಿ
ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮದ ಅಂಗವಾಗಿ ಜನವರಿ 18 ಮತ್ತು 22ರಂದು ನಗರದಲ್ಲಿ 11.27 ಲಕ್ಷ ಮಕ್ಕಳಿಗೆ ಪೋಲಿಯೊ...

ಬೆಂಗಳೂರು: ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮದ ಅಂಗವಾಗಿ ಜನವರಿ 18 ಮತ್ತು 22ರಂದು ನಗರದಲ್ಲಿ 11.27 ಲಕ್ಷ ಮಕ್ಕಳಿಗೆ ಪೋಲಿಯೊ ಹನಿಹಾಕಲು ಬಿಬಿಎಂಪಿ ಸಜ್ಜಾಗಿದೆ.
ದೇಶ ಈಗಾಗಲೇ ಪೋಲಿಯೋ ಮುಕ್ತವಾಗಿದ್ದರೂ ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ನೈಜೀರಿಯಾದಲ್ಲಿ ರೋಗ ಕಂಡುಬಂದಿರುವುದರಿಂದ ದೇಶಾದ್ಯಂತ ಕಾರ್ಯಕ್ರಮವನ್ನು ಮುಂದುವರಿಸಲಾಗುತ್ತಿದೆ. ಅದರಂತೆ ನಗರದಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗವು ಕುಟುಂಬ ಕಲ್ಯಾಣ ಇಲಾಖೆ ಜತೆಗೂಡಿ ಈ ಕಾರ್ಯಕ್ರಮ ರೂಪಿಸಿದೆ ಎಂದು ಮೇಯರ್ ಶಾಂತಕುಮಾರಿ ಹೇಳಿದರು.
ಬಿಬಿಎಂಪಿ, ಆರೋಗ್ಯ ಇಲಾಖೆ ಹಾಗೂ ರೋಟರಿಯಂಥ ವಿವಿಧ ಸಂಘ ಸಂಸ್ಥೆಗಳ ಸ್ವಯಂ ಸೇವಕರು ಸೇರಿದಂತೆ 1500ಕ್ಕೂ ಹೆಚ್ಚಿನ ಮುಖ್ಯಸ್ಥರು, 14,358 ಲಸಿಕಾ ಕಾರ್ಯಕರ್ತರು, 718 ಮೇಲ್ವಿಚಾರಕರು ಕಾರ್ಯಕ್ರಮದಲ್ಲಿ ಭಾಗವಹಿಸಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ. ಕಾರ್ಯಕ್ರಮದ ಪೂರ್ವಭಾವಿಯಾಗಿ ಜ. 16ರಂದು ಪೋಲಿಯೊ ಹನಿ ಕುರಿತು ಪೋಷಕರನ್ನು ಜಾಗೃತಗೊಳಿಸಲು ಜಾಥಾ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ ಎಂ.ಜಿ ರಸ್ತೆಯಿಂದ ಬಿಬಿಎಂಪಿ ಕೇಂದ್ರ ಕಚೇರಿವರೆಗೂ ಪೋಲಿಯೋ ಹನಿ ಕುರಿತ ಸಂದೇಶ ನೀಡುವ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
5 ವರ್ಷದ ಒಳಗಿನ ಮಕ್ಕಳಿಗೆ ಈಗಾಗಲೇ ಎಷ್ಟೇ ಬಾರಿ ಪೊಲಿಯೋ ಹನಿ ಹಾಕಿಸಿದ್ದರೂ ಮತ್ತೆ ಈ ಬಾರಿ ಹಾಕಿಸುವುದು ಕಡ್ಡಾಯವಾಗಿದ್ದು, ಇದನ್ನು ಜನರಿಗೆ ಸಾರಿ ಹೇಳಲು ಜಾಗೃತಿ ನಡೆಸಲಾಗುತ್ತಿದೆ. ಹಾಗೆಯೇ ಈ ಬಗ್ಗೆ ಸಮೂಹ ಮಾಧ್ಯಮಗಳ ಮೂಲಕ ಪ್ರಚಾರವನ್ನೂ ನೀಡಲಾಗಿದೆ ಎಂದು ಮೇಯರ್ ಹೇಳಿದರು.
ಉಪ ಮೇಯರ್ ರಂಗಣ್ಣ, ಪ್ರತಿಪಕ್ಷ ನಾಯಕ ಮಂಜುನಾಥ ರೆಡ್ಡಿ ಹಾಗೂ ಆರೋಗ್ಯ ವಿಭಾಗದ ಜಂಟಿ ಆಯುಕ್ತ ಯತೀಶ್‌ಕುಮಾರ್ ಹಾಜರಿದ್ದರು.
3390 ಕಡೆ
ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮೀನಾರಾಯಣ ಮಾತನಾಡಿ, ನಗರದಲ್ಲಿರುವ ಎಲ್ಲ ರೀತಿಯ ಆಸ್ಪತ್ರೆಗಳು , ಸಣ್ಣಪುಟ್ಟ ಕ್ಲಿನಿಕ್‌ಗಳು, ಅಂಗನವಾಡಿ ಕೇಂದ್ರಗಳು, ಮಾಲ್ ಗಳು, ಬಸ್ ನಿಲ್ದಾಣಗಳು, ರೈಲ್ವೇ ನಿಲ್ದಾಣಗಳು ಹಾಗೂ ಮೆಡಿಕಲ್ ಕಾಲೇಜುಗಳು ಪೋಲಿಯೋ ಬೂತ್‌ಗಳು ಸಂಚಾರಿ ಬೂತ್‌ಗಳು ಸೇರಿದಂತೆ 3390 ಕಡೆ ಪೋಲಿಯೇ ಹನಿ ಹಾಕುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯಾಧಿಕಾರಿಗಳಊ ಸೇರಿದಂತೆ 35 ಮಂದಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


