ಜಿಲ್ಲಾ ಸುದ್ದಿ

ಕಾಲುವೆಗೆ ಉರುಳಿದ ಟ್ರ್ಯಾಕ್ಟರ್: ಒಂದೇ ಕುಟುಂಬದ ನಾಲ್ವರು ಸಾವು

ಕಾಲುವೆಗೆ ಉರುಳಿದ ಟ್ರ್ಯಾಕ್ಟರ್: ಒಂದೇ ಕುಟುಂಬದ ನಾಲ್ವರು ಸಾವು
ಕಾಲುವೆಗೆ ಉರುಳಿದ ಟ್ರ್ಯಾಕ್ಟರ್(ಸಾಂದರ್ಭಿಕ ಚಿತ್ರ)
Published On :

ಜೋಗುಂಡಬಾವಿ(ಯಾದಗಿರಿ): ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಜೋಗುಂಡಬಾವಿ ಗ್ರಾಮದ ನಾರಾಯಣಪುರ ಎಡದಂಡೆ ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಟ್ರ್ಯಾಕ್ಟರ್ ಹಾಗೂ ಬಟ್ಟೆ ತೊಳೆಯಲು ನಾರಾಯಣಪುರ ಎಡದಂಡೆ ಕಾಲುವೆಗೆ ತೆರಳಿದ್ದರು. ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಚಾಲಕ ಶರಣಪ್ಪ ಟ್ರ್ಯಾಕ್ಟರನ್ನು ಹಿಂಬದಿಯಾಗಿ ಚಲಾಯಿಸುತ್ತಿರುವಾಗ ಕಾಲುವೆಗೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ.

ಮೃತರೆಲ್ಲರು ಸುರಪುರ ತಾಲೂಕಿನ ಎಣ್ಣಿವಡಗೇರಾ ಗ್ರಾಮದ ಗದ್ದೆಮ್ಮ(30), ಮಕ್ಕಳಾದ ಕಾಳಿಂಗ(7), ಬೀರಲಿಂಗ(8) ಶರಣಪ್ಪ(28) ಎಂದು ಗುರುತಿಸಲಾಗಿದೆ.

ಈ ದುರಂತ ಸಂಭವಿಸಿ ಎರಡು ಗಂಟೆ ಕಳೆದರು ಘಟನಾ ಸ್ಥಳಕ್ಕೆ ಪೊಲೀಸರು ಬಾರದ ಹಿನ್ನೆಲೆಯಲ್ಲಿ ಎಣ್ಣೆವಡಗೇರಾ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾರಾಯಣಪುರ ಎಡದಂಡೆ ಕಾಲುವೆಗೆ ನಿನ್ನೆಯಷ್ಟೇ ಬಸವಸಾಗರ ಡ್ಯಾನಿಂದ ನೀರು ಹರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.