ಕೊತ್ವಾಲ್ ವಿರುದ್ಧ ಗೂಂಡಾ ಕಾಯ್ದೆ
ಇಪ್ಪತ್ತೆರಡನೇ ವರ್ಷಕ್ಕೆ 32 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಸದ್ಯ ಜೈಲಿನಲ್ಲಿರುವ ಆರೋಪಿ...

ಬೆಂಗಳೂರು: ಇಪ್ಪತ್ತೆರಡನೇ ವರ್ಷಕ್ಕೆ 32 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಸದ್ಯ ಜೈಲಿನಲ್ಲಿರುವ ಆರೋಪಿ ವಿಶ್ವಾಸ್ ಅಲಿಯಾಸ್ ಕೊತ್ವಾಲ್‌ನ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ವಿಭಾಗ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.
ತನ್ನ ಸಹಚರರರೊಂದಿಗೆ ಸೇರಿ ಹಲ್ಲೆ, ಕೊಲೆ ಯತ್ನ, ರಾಬರಿ, ಸರ ಅಪಹರಣ, ದರೋಡೆ ಸಿದ್ಧತೆ, ಮನೆ ಕಳ್ಳತನ ಮುಂತಾದ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ವಿಶ್ವಾಸ್ ವಿರುದ್ಧ ಗೂಂಡಾ ಕಾಯ್ದೆ ಅನ್ವಯ ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ವರದಿ ಸಲ್ಲಿಸಲಾಗಿತ್ತು. ಈ ವರದಿ ಆಧಾರಿಸಿ ನಗರ ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆ ಅನ್ವಯ ಕ್ರಮಕ್ಕೆ ಆದೇಶಿಸಿದ್ದಾರೆ.
ವಿಶ್ವಾಸ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 32 ಪ್ರಕರಣಗಳು ದಾಖಲಾಗಿವೆ. ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದ ನಂತರ ಷರತ್ತುಗಳನ್ನು ಉಲ್ಲಂಘಿಸಿ ತನ್ನ ಅಪರಾಧ ಕೃತ್ಯಗಳನ್ನು ಮುಂದುವರೆಸಿದ್ದ. ಇತ್ತೀಚೆಗೆ ವಿವೇಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


