ಫ್ಲೆಕ್ಸ್ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಭಾರಿ ವಿರೋಧ
ಫ್ಲೆಕ್ಸ್ ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಿಢೀರನೆ ಫ್ಲೆಕ್ಸ್ ಉದ್ಯಮಗಳಿಗೆ ಬೀಗ ಹಾಕುತ್ತಿದ್ದು...

ಬೆಂಗಳೂರು: ಫ್ಲೆಕ್ಸ್ ನಿಷೇಧಿಸುವ ರಾಜ್ಯ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ದಿಢೀರನೆ ಫ್ಲೆಕ್ಸ್ ಉದ್ಯಮಗಳಿಗೆ ಬೀಗ ಹಾಕುತ್ತಿದ್ದು ಇದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ.
ಇದೊಂದು ಸಣ್ಣ ಕೈಗಾರಿಕೆಯಾಗಿದ್ದು, ಲಕ್ಷಾಂತರ ಜನರು ಇದರಿಂದ ಉದ್ಯೋಗ ಪಡೆದು ಜೀವನ ನಡೆಸುತ್ತಿದ್ದಾರೆ. ಇವರನ್ನು ಬೀದಿಪಾಲು ಮಾಡಬಾರದು ಎಂದು ರಾಜ್ಯ ಡಿಜಿಟಲ್ ಮತ್ತು ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಕೃಷ್ಣಪ್ಪಗೌಡ ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಕಾನೂನು ಪ್ರಕಾರವೇ ಬೆಂಗಳೂರಲ್ಲಿ 550 ಫ್ಲೆಕ್ಸ್ ಉದ್ಯಮಗಳನ್ನು ನಡೆಸಲಾಗುತ್ತಿದೆ. ಇದುವರೆಗೂ ನಿಷೇಧದ ಬಗ್ಗೆ ನಮಗೆ ಅಧಿಕೃತ ನೋಟಿಸ್ ಬಂದಿಲ್ಲ. ಆದರೂ ಜಾಲಹಳ್ಳಿಯ 5 ಫ್ಲೆಕ್ಸ್ ಉದ್ಯಮಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ ಎಂದು ಹೇಳಿದರು.
ಫ್ಲೆಕ್ಸ್ ನಿಂದ ರಾಜಧಾನಿಯ ಸೌಂದರ್ಯವನ್ನೇನೂ ನಾವು ಕೆಡಿಸುತ್ತಿಲ್ಲ. ಬೆಂಗಳೂರಿನ ಸೌಂದರ್ಯ ಹೆಚ್ಚಳಕ್ಕೆ ನಾವೂ ಸರ್ಕಾರದ ಜೊತೆ ಕೈಜೋಡಿಸುತ್ತೇವೆ. ನಿಜವಾಗಿಯೂ ನಗರದ ಅಂದ ಕೆಡಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಅವರು ಹೇಳಿದರು. ರಾಜಧಾನಿಯಲ್ಲಿ ಆದ ಗತಿಯೇ ನಾಳೆ ಜಿಲ್ಲಾ, ತಾಲೂಕು ಮಟ್ಟದಲ್ಲಿ ಆಗುವುದಿಲ್ಲ ಎಂಬುದಕ್ಕೆ ಏನು ಖಾತ್ರಿಯಿದೆ? ಅಲ್ಲಿನ ಫ್ಲೆಕ್ಸ್ ಮಾಲೀಕರು, ನೌಕರರು ಬೀದಿಪಾಲು ಆಗಬೇಕೆ ಎಂದು ಪ್ರಶ್ನಿಸಿದ ಅವರು, ಸರ್ಕಾರ ತಕ್ಷಣವೇ ತನ್ನ ನಿರ್ಧಾರ ವಾಪಸ್ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


