ದರ್ಗಾಕ್ಕೆ ಬೆಂಕಿ ಹಚ್ಚಲು ಯತ್ನ
ಭದ್ರಾವತಿಯ ಹಳೇ ನಗರದ ಖಾಜೀಮುಲ್ಲಾ ಪ್ರದೇಶದಲ್ಲಿನ ಸುಮಾರು 150 ವರ್ಷಗಳ ಇತಿಹಾಸವುಳ್ಳ ಹಜರತ್ ಸೈಯದ್ ಹೈದರ್ ಮಸ್ತಾನ್...

ಶಿವಮೊಗ್ಗ: ಭದ್ರಾವತಿಯ ಹಳೇ ನಗರದ ಖಾಜೀಮುಲ್ಲಾ ಪ್ರದೇಶದಲ್ಲಿನ ಸುಮಾರು 150 ವರ್ಷಗಳ ಇತಿಹಾಸವುಳ್ಳ ಹಜರತ್ ಸೈಯದ್ ಹೈದರ್ ಮಸ್ತಾನ್ ಷಾ ಖಾದ್ರಿ ದರ್ಗಾದಲ್ಲಿ ಹಸಿರು ಬಟ್ಟೆಗೆ ದುಷ್ಕರ್ಮಿಗಳು ಬುಧವಾರ ರಾತ್ರಿ ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆಸಿದ್ದು, ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಭದ್ರಾವತಿ ಹಳೇ ನಗರದಲ್ಲಿನ ಖಾಜೀಮುಲ್ಲಾ ಪ್ರದೇಶದಲ್ಲಿ ಇರುವ ಈ ದರ್ಗಾಕ್ಕೆ ಹಿಂಬದಿಯಿಂದ ಪ್ರವೇಶಿಸಿರುವ ದುಷ್ಕರ್ಮಿಗಳು ಹಾಸಲಾದ ಹಸಿರು ಬಟ್ಟೆಯನ್ನು ಸುಡುವ ಪ್ರಯತ್ನ ನಡೆಸಿದ್ದಾರೆ. ಅದು ವಿಫಲವಾದ ಬಳಿಕ ಅಲ್ಲಿ ಹಾಕಲಾದ ಹೂವುಗಳನ್ನು ಕಿತ್ತೆಸೆದು, ಅಲಂಕಾರಿಕ ವಿದ್ಯುತ್ ದೀಪಗಳಿಗೆ ಕೂಡ ಹಾನಿ ಮಾಡಿದ್ದಾರೆ. ಈ ಗೋರಿ ಮೇಲೆ ಚಪ್ಪಲಿಯಿಂದ ನಡೆದಾಡಿದ ಗುರುತುಗಳು ಇವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಸ್ಥಳದಲ್ಲಿ ನೂರಾರು ಜನ ಜಮಾವಣೆಗೊಂಡಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿದರು. ಪರಿಸ್ಥಿತಿ ಕೈಮೀರುವ ಸಾಧ್ಯತೆ ಕಾಣಿಸುವ ಹೊತ್ತಿಗೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ರಂಜಾನ್ ತಿಂಗಳಲ್ಲಿ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆಸಿದ್ದಾರೆ. ಈ ದುಷ್ಕರ್ಮಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೊಕ್ಕಾಂ ಹೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


