ಚಾಮುಂಡಿಬೆಟ್ಟ ಏರಿದ ರೆಡ್ಡಿ, ಶ್ರೀರಾಮುಲು
ಗಣಿ ಹಗರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಸಂಸದ ಬಿ. ಶ್ರೀರಾಮುಲು ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಶನಿವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು...

ಮೈಸೂರು: ಗಣಿ ಹಗರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಸಂಸದ ಬಿ. ಶ್ರೀರಾಮುಲು ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಶನಿವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿಬೆಟ್ಟದ ಒಂದು ಸಾವಿರ ಮೆಟ್ಟಿಲುಗಳನ್ನು ಹತ್ತಿ ತಾಯಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಹಿಂದೆ ಶ್ರೀರಾಮುಲು ಅವರು ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನು ಹತ್ತಿದ್ದರು.
ಇದೇ ಮೊದಲ ಬಾರಿಗೆ ತಮ್ಮ ಸ್ನೇಹಿತ ಜನಾರ್ದನ ರೆಡ್ಡಿ ಅವರೊಂದಿಗೆ ಮೆಟ್ಟಿಲು ಹತ್ತಿದ್ದು ವಿಶೇಷ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶ್ರೀರಾಮುಲು, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


