ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಎಫ್‌ಐಆರ್ ದಾಖಲು
ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್...

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ನಿವೇಶನ ಕಬಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮಾಜಿ ಮೇಯರ್ ವೆಂಕಟೇಶಮೂರ್ತಿ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆ(ಬಿಎಂಟಿಎಫ್) ಮಂಗಳವಾರ ಎಫ್‌ಐಆರ್ ದಾಖಲಿಸಿದೆ.
ಪದ್ಮನಾಭನಗರದಲ್ಲಿ ಅಕ್ರಮವಾಗಿ ನಿವೇಶನ ಕಬಳಿಸಿದ ಆರೋಪದ ಮೇಲೆ ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ.ಪ್ರಭಾ ಮತ್ತು ಇದಕ್ಕೆ ಸಹಕರಿಸಿದ ಕೆಲವು ಬಿಡಿಎ ಅಧಿಕಾರಿಗಳ ವಿರುದ್ಧ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದೆ.
ಪದ್ಮನಾಭನಗರದ 7ನೇ ಕ್ರಾಸ್‌ನಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಬಿಡಿಎ ಮೀಸಲಿಟ್ಟಿದ್ದ ನಿವೇಶನವನ್ನು ಮಾಜಿ ಮೇಯರ್ ವೆಂಕಟೇಶಮೂರ್ತಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮುನಿಕೃಷ್ಣ ಎಂಬುವವರು ದೂರು ನೀಡಿದ್ದರು. ಈ ದೂರಿನ ಅನ್ವಯ ಈಗ ಬಿಎಂಟಿಎಫ್ ಎಫ್‌ಐಆರ್ ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


