ಜಿಲ್ಲಾ ಸುದ್ದಿ

ಲೋಕಾಯುಕ್ತ ಹಗರಣದ ಬಗ್ಗೆ ಕಾನೂನು ಹೋರಾಟಕ್ಕೆ ಲೀಗಲ್ ಸೆಲ್ ತಡೆ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಲಂಚ ಹಗರಣದ ಬಗ್ಗೆ ಕಾನೂನು ಹೋರಾಟ ನಡೆಸಬಾರದೆಂದು ಸಂಸ್ಥೆಯ ಕಾನೂನು ಘಟಕ ತನ್ನ ಪೊಲೀಸರಿಗೆ ಅಧಿಕೃತವಾಗಿ ತಿಳಿಸಿದೆ.

ಲೋಕಾಯುಕ್ತ ಹಗರಣದ ಬಗ್ಗೆ ಕಾನೂನು ಹೋರಾಟಕ್ಕೆ ಲೀಗಲ್ ಸೆಲ್ ತಡೆ
ನ್ಯಾ.ವೈ ಭಾಸ್ಕರ್ ರಾವ್
Published On :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ರೂ.1 ಕೋಟಿ ಲಂಚ ಹಗರಣದ ಬಗ್ಗೆ ಯಾವುದೇ ರೀತಿಯ ತನಿಖೆ ಹಾಗೂ ಕಾನೂನು ಹೋರಾಟ ನಡೆಸಬಾರದೆಂದು ಸಂಸ್ಥೆಯ ಕಾನೂನು ಘಟಕ ತನ್ನ ಪೊಲೀಸರಿಗೆ ಅಧಿಕೃತವಾಗಿ ತಿಳಿಸಿದೆ.

ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಉಪಲೋಕಾಯುಕ್ತ ನ್ಯಾ. ಸುಭಾಷ್ ಬಿ. ಅಡಿ ಅವರು ನೀಡಿದ ನಿರ್ದೇಶನಕ್ಕೆ ಹೈಕೋರ್ಟ್ ತಡೆ ನೀಡಿದೆ. ಆದರೆ ಜಿಲ್ಲಾಪಂಚಾಯತ್ ಕಾರ್ಯನಿರ್ವಾಹಕ ಎಂಜಿನಿಯರ್ ಕೃಷ್ಣಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಎಫ್.ಐ.ಆರ್ ದಾಖಲಿಸಿಕೊಳ್ಳಲಾಗಿದೆ. ಅದಕ್ಕೆ ಯಾವುದೇ ರೀತಿಯ ತಡೆ ನೀಡಿಲ್ಲ. ಹೀಗಾಗಿ ತನಿಖೆ ಮುಂದುವರೆಸಬಹುದೇ ಎಂಬುದರ ಬಗ್ಗೆ ಸಲಹೆ ನೀಡುವಂತೆ ಲೋಕಾಯುಕ್ತ ಪೊಲೀಸ್ ವಿಭಾಗ, ಕಾನೂನು ಘಟಕಕ್ಕೆ ಪತ್ರ ಬರೆದಿತ್ತು. ಅಲ್ಲದೇ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ಬಗ್ಗೆಯೂ ಸಲಹೆ ಕೋರಲಾಗಿತ್ತು.

ಈ ಬಗ್ಗೆ ಪರಿಶೀಲನೆ ನಡೆಸಿದ ಕಾನೂನು ಘಟಕ, ಯಾವುದೇ ರೀತಿಯ ತನಿಖೆಯನ್ನಾಗಲಿ ಅಥವಾ ಕಾನೂನು ಹೋರಾಟ ನಡೆಸದಂತೆ ಅಧಿಕೃತವಾಗಿ ಪತ್ರ ಬರೆದಿದೆ ಎಂದು ಮೂಲಗಳು ಹೇಳಿವೆ. ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ತಂಡ ವರದಿ ಸಲ್ಲಿಸುವವರೆಗೂ ಲೋಕಾಯುಕ್ತರಾಗಲಿ ಅಥವಾ ಉಪಲೋಕಾಯುಕ್ತರಾಗಲಿ ಪ್ರಕರಣವನ್ನು ಲೋಕಯುಕ್ತ ಸಂಸ್ಥೆಯ ಆಂತರಿಕ ತನಿಖೆಗೆ ಆದೇಶಿಸಬಾರದು ಮತ್ತು ವಿಶೇಷ ತನಿಖಾ ತಂಡದವರದಿಗೆ ಕಾಯಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಒಂದು ವೇಳೆ ತನಿಖೆ ನಡೆಸಿದರೆ ನ್ಯಾಯಾಂಗ ನಿಂದನೆ ಎದುರಿಸಬೇಕಾಗುತ್ತದೆ ಎಂಬ ಸಲಹೆಯನ್ನು ಪತ್ರದಲ್ಲಿ ನೀಡಲಾಗಿದೆ. ಕಾನೂನು ಘಟಕದ ಈ ಸಲಹೆ ಲೋಕಾಯುಕ್ತ ನ್ಯಾ.ವೈ ಭಾಸ್ಕರ್ ರಾವ್ ಅವರ ಸೂಚನೆ ಮೇರೆಗೆ ಆಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.