ವೈ.ಭಾಸ್ಕರ್‌ರಾವ್ ರಾಜೀನಾಮೆ ಆಗ್ರಹಿಸಿ ರಾಜಭವನಕ್ಕೆ ಮುತ್ತಿಗೆ ಹಾಕಿದ ವಕೀಲರು
ಕರ್ನಾಟಕ ಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆ ಮುತ್ತಿಗೆ ಹಾಕಿತು...

ಬೆಂಗಳೂರು: ಕರ್ನಾಟಕಲೋಕಾಯುಕ್ತದಲ್ಲಾದ ಭ್ರಷ್ಟಚಾರ ವಿರೋಧಿಸಿ ಬೆಂಗಳೂರು ವಕೀಲರ ಸಂಘಗಳ ಒಕ್ಕೂಟವು ಗುರುವಾರ ರಾಜಭವನಕ್ಕೆಮುತ್ತಿಗೆ ಹಾಕಿತು.
ಭ್ರಷ್ಟಾಚಾರನಿಯಂತ್ರಿಸುವ ಲೋಕಾಯುಕ್ತ ಸಂಸ್ಥೆಯಲ್ಲೇ ಭ್ರಷ್ಟಾಚಾರ ನಡೆದಿದ್ದು, ನ್ಯಾಯಮೂರ್ತಿವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ನಿನ್ ರಾವ್ ಅವರು ಲೋಕಾಯುಕ್ತ ಕಚೇರಿಯಲ್ಲಿ ಮತ್ತು ಲೋಕಾಯುಕ್ತನಿವಾಸದಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡಿದ್ದಾರೆ. ಈ ಕುರಿತಂತೆ ವಕೀಲರ ಸಂಘ ಪ್ರತಿಭಟನೆನಡೆಸುತ್ತಿದ್ದರೂ ಭಾಸ್ಕರ್ ರಾವ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ಏನೂ ತಿಳಿಯದಂತಿದ್ದಾರೆ. ಹೀಗಾಗಿ ರಾಜ್ಯಪಾಲರು ಕೂಡಲೇ ಪ್ರಕರಣಸಂಬಂಧ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆವೇಳೆ ವಕೀಲರ ಸಂಘ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ರಾಜೀನಾಮೆ ನೀಡಬೇಕು ಆಗ್ರಹಿಸಿದ್ದು, ಲೋಕಾಯುಕ್ತಭ್ರಷ್ಟಾಚಾರ ಪ್ರಕರಣವನ್ನು ಸಿಬಿಐ ತನಿಖೆಗೊಪ್ಪಿಸುವಂತೆ ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


