ಚುನಾವಣೆಗೆ ಮುನ್ನ ನಾನಾ ಕಾಮಗಾರಿಗಳಿಗೆ ಚಾಲನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ನೀತಿ ಸಂಹಿತೆ ಆರಂಭವಾಗುವ ಮುನ್ನವೇ ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗೆ ಪಾಲಿಕೆ ಸಜ್ಜಾಗಿದೆ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ನೀತಿ ಸಂಹಿತೆ ಆರಂಭವಾಗುವ ಮುನ್ನವೇ ನಗರ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಗೆ ಪಾಲಿಕೆ ಸಜ್ಜಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ, ನೀತಿ ಸಂಹಿತೆ ಆರಂಭವಾಗುವ ಮುನ್ನ ಉದ್ಘಾಟಿಸಬೇಕಾದ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಆಗಸ್ಟ್ 23 ಅಥವಾ 24ರಂದು ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ಅವಧಿಯೊಳಗೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು. ಮುಂದಿನ ಶನಿವಾರ ಅಥವಾ ಭಾನುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಆರಂಭವಾಗಬೇಕಾದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಜಾಹಿರಾತು ತೆರವಿಗೆ ಟೆಂಡರ್: ಜಾಹಿರಾತು ಫಲಕ ದರ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನಧಿಕೃತ ಜಾಹಿರಾತು ಗುರುತಿಸಿದ್ದು, ತೆರವುಗೊಳಿಸಲು ಟೆಂಡರ್ ಕರೆಯಲಾಗಿದೆ. ಜಾಹಿರಾತು ಅಕ್ರಮದಿಂದ 2 ಸಾವಿರ ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿ ಜಾಹಿರಾತು ವಿಭಾಗದ ಸಹಾಯಕ ಆಯುಕ್ತ ಮಥಾಯ್ ಅವರು ನೀಡಿದ ವರದಿ ಇನ್ನೂ ಕೈ ಸೇರಿಲ್ಲ. ವರದಿ ದೊರೆತ ನಂತರ ಪರಿಶೀಲಿಸಲಾಗುವುದು ಎಂದು ಆಡಳಿತಾಧಿಕಾರಿ ವಿಜಯ್ ಭಾಸ್ಕರ್ ತಿಳಿಸಿದರು.
ಬಿಬಿಎಂಪಿ ಚುನಾವಣೆ ಖಂಡಿತ ನಡೆಯಲಿದೆ. ಕಳೆದ ಬಾರಿ ಬಿಜೆಪಿ ಮೂರು ವರ್ಷ ಚುನಾವಣೆ ಮುಂದೂಡಿದಂತೆ ಈಗ ಮಾಡಲು ಸಾಧ್ಯವಿಲ್ಲ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಿಬಿಎಂಪಿ ಚುನಾವಣೆಯಲ್ಲೂ ಜನ ಬೆಂಬಲ ನೀಡಿದ್ದಾರೆ.
-ರಾಮಲಿಂಗಾರೆಡ್ಡಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


