ಗಾಯಕಿ ಅತ್ಯಾಚಾರ: ಹುಬ್ಬಳ್ಳಿಯಲ್ಲಿ ಸಿಐಡಿ ಅಧಿಕಾರಿಗಳ ತಂಡ
ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಯಲ್ಲಿ ತನಿಖೆ ನಡೆಸಿದೆ.

ಹುಬ್ಬಳ್ಳಿ: ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಹುಬ್ಬಳ್ಳಿಯಲ್ಲಿ ತನಿಖೆ ನಡೆಸಿದೆ.
ಸಿಐಡಿ ಡಿವೈಎಸ್ಪಿ ಪುರುಷೋತ್ತಮ ಚಂದ್ರಶೇಖರ ನೇತೃತ್ವದ ತಂಡ ಪ್ರೇಮಲತಾ ದಿವಾಕರ್ ಜತೆ ಇಲ್ಲಿನ ಮಂಜುನಾಥ್ ನಗರಕ್ಕೆ ಭೇಟಿ ನೀಡಿತು. 2013 ರಲ್ಲಿ ಮಂಜುನಾಥ ನಗರದ ರಾಘವೇಂದ್ರ ದೇವಸ್ಥಾನದಲ್ಲಿ ರಾಮಕಥಾ ಆಯೋಜಿಸಲಾಗಿತ್ತು. ಈ ವೇಳೆ ರಾಘವೇಶ್ವರ ಶ್ರೀಗಳು ಇಲ್ಲಿನಮನೆಯೊಂದರಲ್ಲಿ ವಾಸವಾಗಿದ್ದರು. ಪ್ರೇಮಲತಾ ದಿವಾಕರ್ ಸಹ ಇಲ್ಲಿಯೇ ಉಳಿದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೇಮಲತಾ, ರಾಘವೇಶ್ವರ ಶ್ರೀಗಳು ತಮ್ಮನ್ನು ಸಮಾಜದಿಂದ ಬಹಿಷ್ಕಾರ ಹಾಕುವ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದರು. ಸಿಐಡಿ ಅಧಿಕಾರಿಗಳು ಕ್ರಮಬದ್ಧವಾಗಿ ತನಿಖೆ ಮಾಡುತ್ತಿದ್ದಾರಾದರೂ ವಿಳಂಬ ಮಾಡುತ್ತಿದ್ದಾರೆ. ಏಕೆ ಎಂದು ತಿಳಿಯುತ್ತಿಲ್ಲ. ಮಾಹಿತಿ ಪ್ರಕಾರ ಅಧಿಕಾರಿಗಳ ಮೇಲೆಯೂ ಒತ್ತಡ ತರಲಾಗುತ್ತಿದೆ ಎಂದು ಪ್ರೇಮಲತಾ ಪತಿ ದಿವಾಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


