ಸಾಬೂನು ಕಾರ್ಖಾನೆಯಲ್ಲಿ ರೂ.4 .64 ಕೋಟಿ ಅಕ್ರಮ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಕಚ್ಚಾ ವಸ್ತುಗಳ ಖರೀದಿಯಲ್ಲಿ ರೂ.4 .64 ಕೋಟಿ ಅಕ್ರಮ ನಡೆದಿದೆ.

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಕಚ್ಚಾ ವಸ್ತುಗಳ ಖರೀದಿಯಲ್ಲಿ ರೂ.4 .64 ಕೋಟಿ ಅಕ್ರಮ ನಡೆದಿದೆ. ಇದರಲ್ಲಿ ಭಾಗಿಯಾಗಿರುವ ಅಂದಿನ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಅಧಿಕಾರಿಗಳ ಕರ್ತವ್ಯ ಲೋಪ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ ಉದ್ಯಮಗಳ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಬಾಲಾಜಿ ಫುಡ್ ಪ್ರೊಸೆಸಿಂಗ್ ಇಂಡಸ್ಟ್ರೀಸ್ ಅವರಿಂದ ಸಾಮಗ್ರಿಗಳು ಸಂಪೂರ್ಣವಾಗಿ ಸ್ವೀಕೃತವಾಗದಿದ್ದರೂ ಕಂಪನಿಯಿಂದ ಅಧಿಕವಾಗಿ ರೂ.4 .64 ಕೋಟಿ ಪಾವತಿಸಲಾಗಿದ್ದು ಅದನ್ನು ವಾಪಸ್ ಪಡೆದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಬಾಲಾಜಿ ಕಂಪನಿ ತೆರೆದಿರುವ 3 ಎಲ್.ಸಿ(ಲೆಟರ್ ಆಫ್ ಕ್ರೆಡಿಟ್) ಗೆ ಹಣ ಬಿಡುಗಡೆ ಮಾಡಬಾರದು ಎಂದು ಕಾರ್ಪೊರೇಷನ್ ಬ್ಯಾಂಕ್ ಗೆ ತಿಳಿಸಿದ್ದರೂ ಬ್ಯಾಂಕ್ ಹಣ ಬಿಡುಗಡೆ ಮಾಡಿದೆ.
ಇದರಲ್ಲಿ ಹಿರಿಯ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಿ ಅಧಿಕ ಪಾವತಿಗೆ ಕಾರಣರಾದವರ ಬಗ್ಗೆ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ. ಸಾರ್ವಜನಿಕ ಉದ್ಯಮಗಳ ಸಮಿತಿ ಅಧ್ಯಕ್ಷ ಮಾಲಿಕಯ್ಯ ವೆಂಕ್ಯ ಗುತ್ತೇದಾರ್ ಅವರು 2014 -15 ನೇ ಸಾಲಿನ 131 ನೇ ವರದಿಯನ್ನು ವಿಧಾನಸಭೆಯಲ್ಲಿ ಒಪ್ಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


