ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಪ್ರಕಟ: ಆಗಸ್ಟ್ 22ಕ್ಕೆ ಮತದಾನ, 25ಕ್ಕೆ ಫಲಿತಾಂಶ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 22ರಂದು ಒಂದೇ....

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆಗೆ ಮತ್ತೊಮ್ಮೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 22ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ.
ಹೈಕೋರ್ಟ್ ಸೂಚನೆಯಂತೆ ರಾಜ್ಯ ಚುನಾವಣಾ ಆಯೋಗ ಇಂದು ಬಿಬಿಎಂಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಆಗಸ್ಟ್ 22ರಂದು ಒಂದೇ ಹಂತದಲ್ಲಿ ಎಲ್ಲಾ 198 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ. ಆಗಸ್ಟ್ 25ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಸುಪ್ರೀಂ ಕೋರ್ಟ್ ನೀಡಿರುವ ಅವಧಿಯ ಪ್ರಕಾರ ಆಯೋಗ ಆಗಸ್ಟ್ 28ರ ಒಳಗಾಗಿ ಚುನಾವಣೆ ನಡೆಸಬೇಕಿದ್ದು, ಇದನ್ನಾಧರಿಸಿ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.
ಜುಲೈ 17ರಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಆಗಸ್ಟ್ 3ರಂದು ಚುನಾವಣಾ ಅಧಿಸೂಚನೆ ಪ್ರಕಟಿಸಲಾಗುತ್ತಿದೆ.
ಆಗಸ್ಟ್ 10ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆಗಸ್ಟ್ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಮತ್ತು ನಾಮಪತ್ರ ವಾಪಸ್ ಪಡೆಯಲು ಆಗಸ್ಟ್ 13ರಂದು ಕೊನೆಯ ದಿನವಾಗಿದೆ. ಅಗತ್ಯವಿದ್ದಲ್ಲಿ ಆಗಸ್ಟ್ 24ರಂದು ಮರು ಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


