ವಿಧಾನಸೌಧ ಬಳಿ ಆತ್ಮಹತ್ಯೆ ಯತ್ನ
ವಿಧಾನಸೌಧದ ಬಳಿ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ರುವ ಘಟನೆ ಬುಧವಾರ ಸಂಜೆ...

ಬೆಂಗಳೂರು: ವಿಧಾನಸೌಧದ ಬಳಿ ವ್ಯಕ್ತಿಯೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮಂಡ್ಯ ತಾಲೂಕು ಕುರುಬರ ಸಂಘದ ನಿರ್ದೇಶಕ ಕೆ.ಸಿ.ಪುಟ್ಟಸ್ವಾಮಿಗೌಡ ಆತ್ಮಹತ್ಯೆಗೆ ಯತ್ನಿಸಿದವರು. ಅವರನ್ನು ಗಮನಿಸಿದ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದರು. ತಕ್ಷಣ ಪೊಲೀಸರು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದು, ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಭೂ ವ್ಯವಹಾರದಲ್ಲಿ ಸ್ನೇಹಿತರು ಮೋಸ ಮಾಡಿದ್ದಾರೆ. ಇದರಿಂದ ತನಗೆ ಸಾಕಷ್ಟು ನಷ್ಟವಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ತಪ್ಪಿತಸ್ಥರ ವಿರುದಟಛಿ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಶಾಸಕರೊಬ್ಬರು ನೀಡಿದ್ದ ಪಾಸ್‍ನ ಸಹಾಯದಿಂದ ಪುಟ್ಟಸ್ವಾಮಿಗೌಡ ಅವರು, ಬುಧವಾರ ವಿಧಾನಸೌಧದ ಒಳಗೆ ಬಂದಿದ್ದಾರೆ. ನಂತರ ಅಲ್ಲಿನ ಹುಲ್ಲು ಹಾಸಿನ ಬಳಿ ಕ್ರಿಮಿನಾಶಕ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದೆ.
ಈಶ್ವರಪ್ಪ ಅವರಿಗೆ ಪತ್ರ: ತಮಗಾಗಿರುವ ಅನ್ಯಾಯ ಕುರಿತು ಪುಟ್ಟಸ್ವಾಮಿಗೌಡ ಅವರು ಈ ಹಿಂದೆಯೇ (ಏಪ್ರಿಲ್ 27ರಂದು) ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಮನನೊಂದ ಆತ ವಿಧಾನಸೌಧದ ಬಳಿ ಆಗಮಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಹಾಗೂ ಆ ಪತ್ರದ ಪ್ರತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?:ಕೆಪಿಸಿಸಿ ಸದಸ್ಯ ಬಿ.ಎಸ್. ಶಿವಣ್ಣ, ಆಲ್ಫ್ರೆಡ್ ಜೋಸೆಫ್, ಶಂಭು, ಪ್ರಭು ಅವರೊಂದಿಗೆ ಹತ್ತು ವರ್ಷಗಳಿಂದ ನನಗೆ ಸ್ನೇಹವಿದೆ. ಹಾಗಾಗಿ ಇವರಿಗೆ ರು.15 ಲಕ್ಷ ಸಾಲ ನೀಡಿದ್ದ ಹಣ ವಾಪಸ್ ಕೊಡುವುದಾಗಿ ಹೇಳಿದ್ದ ಅವರು, ಹಣ ಕೇಳಿದರೆ ನನ್ನನ್ನು ಅಪಹರಿಸಿ, ಕೊಲೆ ಮಾಡುವ ಬೆದರಿಕೆ ಹಾಕಿದ್ದಾರೆ. ಅವರ ವರ್ತನೆಯಿಂದ ತಾನು ಪ್ರಾಣ ಭಯದಲ್ಲಿ ಬದುಕುತ್ತಿದ್ದು, ರಕ್ಷಣೆ ನೀಡಬೇಕು ಹಾಗೂ ಸಾಲ ವಾಪಸ್ ಕೊಡಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


