ಸರಣಿ ಆತ್ಮಹತ್ಯೆ: ವರದಿ ಕೇಳಿದ ರಾಜ್ಯಪಾಲರು
ರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ...

ಬೆಂಗಳೂರು: ರಾಜ್ಯದಲ್ಲಿ ರೈತರ ಆತ್ಯಹತ್ಯೆ ಬಗ್ಗೆ ಕಾಳಜಿ ತೋರಿರುವ ರಾಜ್ಯಪಾಲ ವಿ.ಆರ್. ವಾಲಾ, ಸರ್ಕಾರ ಕೈಗೊಂಡಿರುವ ಕ್ರಮಗಳು, ಮುನ್ನೆಚ್ಚರಿಕೆ ಬಗ್ಗೆ ಸಮಗ್ರ ಮಾಹಿತಿಯನ್ನುವಾರದೊಳಗೆ ಒದಗಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರೈತರ ಸರಣಿ ಆತ್ಮಹತ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ದೇಶಾದ್ಯಂತ ವಿಷಯವಾಗಿದೆ. ಎಷ್ಟು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯಾವ ಕಾರಣಕ್ಕೆ ಸಾವುಗಳು ಸಂಭವಿಸಿವೆ. ಸರ್ಕಾರ ಕೈಗೊಂಡಿರುವ ಈವರೆಗಿನ ಕ್ರಮ ಹಾಗೂ ನೀಡಿರುವ ಪರಿಹಾರದ ಬಗ್ಗೆ ಅಂಕಿ-ಅಂಶಗಳ ಸಹಿತ ಸಮಗ್ರ ಮಾಹಿತಿ ನೀಡಬೇಕು. ಅಲ್ಲದೆ, ರೈತರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ಯಾವ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ಸರ್ಕಾರ ವಿವರವಾಗಿ ನೀಡಬೇಕು ಎಂದು ರಾಜ್ಯಪಾಲರು ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿನ ಲೋಕಾಯುಕ್ತ ಪ್ರಕರಣದಲ್ಲಿ ಅಧಿಕಾರಿಗಳ ಮೇಲೆ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರದ ವಿಳಂಬ ನೀತಿಗೆ ಏನು ಕಾರಣ? ಅದಲ್ಲದೆ, ಲೋಕಾಯುಕ್ತ ಭ್ರಷ್ಟಾಚಾರದಲ್ಲಿ ಸರ್ಕಾರದ ಕ್ರಮಗಳ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವಿವರಣೆಯನ್ನು ಕೋರಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದ್ದವು. ಆದರೆ, ರಾಜ್ಯಪಾಲರ ಪತ್ರದ ಬಗ್ಗೆ ಸಿಎಂ ಕಚೇರಿಯ ಮೂಲಗಳು ಸ್ಪಷ್ಟನೆ ನೀಡಿದ್ದು, ರೈತರ ಆತ್ಮಹತ್ಯೆ ಕುರಿತಾದ ಮಾಹಿತಿಯನ್ನಷ್ಟೇ ರಾಜ್ಯಪಾಲರು ಕೇಳಿದ್ದಾರೆ ಎಂದು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


