ಜಿಲ್ಲಾ ಸುದ್ದಿ

ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರ ಬಂಧನ

ಮಧ್ಯರಾತ್ರಿಯಲ್ಲಿ ಚರಂಡಿ ಮೂಲಕ ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರು ಖದೀಮರನ್ನು ಸಾರ್ವಜನಿಕರ...

ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರ ಬಂಧನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮಧ್ಯರಾತ್ರಿಯಲ್ಲಿ ಚರಂಡಿ ಮೂಲಕ ಸುರಂಗ ತೋಡಿ ಆಭರಣದ ಅಂಗಡಿ ದರೋಡೆಗೆ ಯತ್ನಿಸುತ್ತಿದ್ದ ಮೂವರು ಖದೀಮರನ್ನು ಸಾರ್ವಜನಿಕರ ಸಹಾಯದೊಂದೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಚರಂಡಿ ಮೂಲಕ ಸುರಂಗ ತೋಡಿ, ಜೆ.ಪಿ.ನಗರದ ಸಾರಕ್ಕಿಯಲ್ಲಿರುವ ಪ್ರಿಯದರ್ಶಿನಿ ಜ್ಯುವೆಲರ್ಸ್ ಅಂಗಡಿಗೆ ನುಗ್ಗಲು ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಬೀರ್, ಮಹಮದ್ ಹಾಗೂ ಹುಸೇನ್‌ನನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಸುರಂಗ ಕೊರೆಯಲು ನೆರವು ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಇಸ್ಮಾಯಿಲ್ ತಪ್ಪಿಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ಡಿಸಿಪಿ ಲೋಕೇಶ್‌ಕುಮಾರ್ ಅವರು ತಿಳಿಸಿದ್ದಾರೆ.

ಪ್ರಿಯದರ್ಶಿನಿ ಜ್ಯುವೆಲರ್ಸ್ ಅಂಗಡಿಗೆ 10 ಅಡಿಗಳ ದೂರದಲ್ಲಿ ಒಳಚರಂಡಿ ಇದ್ದು, ಚಿನ್ನಾಭರಣ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದಿದ್ದ ದುಷ್ಕರ್ಮಿಗಳು, ಇದನ್ನು ನೋಡಿಕೊಂಡು ಹೋಗಿದ್ದರು. ಬಳಿಕ ಆಭರಣ ದರೋಡೆಗೆ ಸಂಚು ರೂಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.