ಜಿಲ್ಲಾ ಸುದ್ದಿ

ಸಿಎಸ್ ಗೈರಿಗೆ ಹೈಕೋರ್ಟ್ ಅಸಮಾಧಾನ

ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆ ವೇಳೆ ಬಾಂಬ್ ಸ್ಫೋಟದಿಂದ ಮೃತಪಟ್ಟ ಯೋಧನ ಪತ್ನಿಗೆ ಉಡುಪಿ ಜಿಲ್ಲೆ ಸಾಲಿಗ್ರಾಮ ಪಟ್ಟಣ ಪಂಚಾಯ್ತಿ...

ಸಿಎಸ್ ಗೈರಿಗೆ ಹೈಕೋರ್ಟ್ ಅಸಮಾಧಾನ
ಕರ್ನಾಟಕ ಉಚ್ಚ ನ್ಯಾಯಾಲಯ
Published On :

ಬೆಂಗಳೂರು: ಕಾಡುಗಳ್ಳ ವೀರಪ್ಪನ್ ಕಾರ್ಯಾಚರಣೆ ವೇಳೆ ಬಾಂಬ್ ಸ್ಫೋಟದಿಂದ ಮೃತಪಟ್ಟ ಯೋಧನ ಪತ್ನಿಗೆ ಉಡುಪಿ ಜಿಲ್ಲೆ ಸಾಲಿಗ್ರಾಮ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಗೋದಾಮಿನಲ್ಲಿ ಸಿಲಿಂಡರ್ ದಾಸ್ತಾನಿಗೆ ಅಡ್ಡಿಪಡಿಸುತ್ತಿರುವ ವಿಚಾರಕ್ಕೆ ಉತ್ತರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶುಕ್ರವಾರ ವಿಚಾರಣೆಗೆ ಹಾಜರಾಗದ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಹೈಕೋರ್ಟ್ ನಿರ್ದೇಶನದ ಹೊರತಾಗಿಯ  ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವಿಚಾರಣೆಗೆ ಹಾಜರಾಗದಿರುವುದು ಸೂಕ್ತವಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ತಮ್ಮದೇ ಹಕ್ಕುಗಳನ್ನು ಹೊಂದಿರುತ್ತಾರೆ. ಆ ಹಕ್ಕುಗಳ ರಕ್ಷಣೆಯಾಗಬೇಕಿದೆ. ಅರ್ಜಿದಾರರಾದ ಭೋಜಮ್ಮ ವಿಧವೆಯಾಗಿದ್ದು, ಜೀವನಾಧಾರಕ್ಕಾಗಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದಾರೆ. ಆದರೆ, ಅವರ ಏಜೆನ್ಸಿಯ ಸಿಲಿಂಡರ್ ದಾಸ್ತಾನು ಮಾಡಲು ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ. ಅಧಿಕಾರಿಗಳು ಈ ರೀತಿ ಮಾಡುವುದು ಯಾವ ರೀತಿಯ ನ್ಯಾಯ? ಎಂದು ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌವ್ಹಾಣ್ ಅವರಿದ್ದ ಏಕಸದಸ್ಯ ಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ಅಧಿಕಾರಿಗಳ ಕಾರ್ಯವೈಖರಿ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಸ್ಪಷ್ಟನೆ ಪಡೆಯಬೇಕಿದೆ. ಆ ದೃಷ್ಟಿಯಿಂದ ಅವರ ಖುದ್ದು ಹಾಜರಾತಿಗೆ ನ್ಯಾಯಪೀಠ ನಿರ್ದೇಶಿಸಿತ್ತು. ಆದರೆ, ಕಾರಣಗಳನ್ನು ನೀಡಿ ಕೋರ್ಟ್ಗೆ  ಬಾರದಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿಯವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಜುಲೈ 21ರಂದು ಬೆಳಗ್ಗೆ 10.30ಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ಕಟ್ಟುನಿಟ್ಟಾಗಿ ನಿರ್ದೇಶಿಸಿದರು.

ಕಾಡುಗಳ್ಳ ವೀರಪ್ಪನ್ ವಿರುದ್ಧ ಕಾರ್ಯಾಚರಣೆ  ವೇಳೆ ಮೃತಪಟ್ಟಿದ್ದ ಯೋಧ ಎಂ.ಬಿ.ಚಿನ್ನಪ್ಪ ಮೃತಪಟ್ಟ ನಂತರ ಅನುಕಂಪದ ಆಧಾರದಲ್ಲಿ ಪತ್ನಿ  ಎಂ. ಯು.ಬೋಜಮ್ಮ ಅವರಿಗೆ ಕೇಂದ್ರ ಸರ್ಕಾರ ಶ್ರೀಧರ್ ಎಂಟರ್‍ಪ್ರೈಸೆಸ್ ಎಂಬ ಗ್ಯಾಸ್ ಏಜೆನ್ಸಿ ರಂಭಕ್ಕೆ ಅನುಮತಿ ನೀಡಿತ್ತು. ಆದರೆ, ಹೊಸದಾಗಿ ನಿರ್ಮಿಸಿದ ಗೋದಾಮಿನಲ್ಲಿ ಸಿಲಿಂಡರ್ ದಾಸ್ತಾನು ಮಾಡಲು ಜಿಲ್ಲಾಧಿಕಾರಿ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅನುಮತಿ ನೀಡದ ಹಿನ್ನೆಲೆಯಲ್ಲಿ ಭೋಜಮ್ಮ ಹೈಕೋರ್ಟ್ ಮೆಟ್ಟಿಲೇರಿದ್ದರು.

 ಜುಲೈ 7ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳು, ಪ್ರಕರಣದ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಸ್ಪಷ್ಟೀಕರಣ ಕೋರಿ ಜುಲೈ 13ರಂದು ವಿಚಾರಣೆಗೆ ಖುದ್ದು ಹಾಜರಾಗಲು ನಿರ್ದೇಶಿಸಿದ್ದರು. ಮರುದಿನ ಸರ್ಕಾರಿ ವಕೀಲರ ಮನವಿ ಮೇರೆಗೆ ಜುಲೈ 7ರಂದು ಶುಕ್ರವಾರ) ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದರು. ಹೀಗಿದ್ದರೂ ಮುಖ್ಯ ಕಾರ್ಯದರ್ಶಿ ಶುಕ್ರವಾರ ವಿಚಾರಣೆಗೆ ಗೈರಾಗಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ವಿಧಾನ ಮಂಡಲ ಅಧಿವೇಶನ ನಡೆಯುತ್ತಿದೆ. ಹೀಗಾಗಿ ಕಾರ್ಯದೊತ್ತಡದಿಂದ ವಿಚಾರಣೆಗೆ ಮುಖ್ಯ ಕಾರ್ಯದರ್ಶಿಗಳು ಬರಲಿಲ್ಲ ಎಂದರು. ಇದರಿಂದ ನ್ಯಾಯಮೂರ್ತಿ ಬೇಸರಗೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.