ರಾಹುಲ್ ರಾಜ್ಯ ಭೇಟಿ ಮಾಹಿತಿ ಇಲ್ಲ: ಆಸ್ಕರ್
ರಾಜ್ಯಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ...

ಬೆಂಗಳೂರು: ರಾಜ್ಯಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುವ ವಿಚಾರದ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಸ್ಕರ್ ಫರ್ನಾಂಡಿಸ್ ಹೇಳಿದ್ದಾರೆ.
ಉಡುಪಿ ಮತ್ತು ಮಂಗಳೂರು ಜಿಲ್ಲೆ ಶಾಸಕರ ಜತೆ ಬೆಂಗಳೂರಿನ ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು. ರೈತರ ಆತ್ಮಹತ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಕಾಂಗ್ರೆಸ್ ಮೊದಲಿನಿಂದಲೂ ರೈತರ ಪರವಾಗಿದೆ.
ಈ ವಿಚಾರದಲ್ಲಿ ಪಕ್ಷದಲ್ಲಿ ಭಿನ್ನಮತ ಇಲ್ಲ. ಎಸ್.ಎಂ.ಕೃಷ್ಣ ಅವರು ಮಂಡ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಿದ್ದಾರೆ. ಭಾನುವಾರ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ರೈತ ಕುಟುಂಬಗಳಿಗೆ ಸಾಂತ್ವನ ಹೇಳುತ್ತಾರೆ ಎಂದರು. ಅಪೆಕ್ಸ್ ಬ್ಯಾಂಕ್‍ಗೆ ಲಾಬಿ: ದಕ್ಷಿಣ ಕನ್ನಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಆಸ್ಕರ್ ನೇತೃತ್ವದ ನಿಯೋಗ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


