ಮಂಡ್ಯ ಜಿಲ್ಲೆಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ
ಮಂಡ್ಯ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಸಾಲಬಾಧೆಯಿಂದ ಸೋಮವಾರ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಸಾಲಬಾಧೆಯಿಂದ ಸೋಮವಾರ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 20 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬಿಲ್ಲೇನಹಳ್ಳಿಯಲ್ಲಿ 60 ವರ್ಷದ ರೈತ ರಂಗೇಗೌಡ ತಮ್ಮ ಜಮೀನನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ರಂಗೇಗೌಡ, ನಾಲ್ಕು ಲಕ್ಷ ರುಪಾಯಿ ಕೈ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
6 ಎಕರೆ ಜಮೀನು ಹೊಂದಿದ್ದ ರಂಗೇಗೌಡ ಮಳೆ ಆಶ್ರಯದಲ್ಲಿ ಬಾಳೆ ಹಾಗೂ ಮತ್ತಿತರ ಬೆಳೆ ಬೆಳೆಯುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


