ಆಂಜನೇಯ ಸ್ವಾಮಿ ದೇಗುಲದಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಪ್ರಖ್ಯಾತಿ ದೇವಾಲಯವಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಯಲಗೂರು ಗ್ರಾಮದ ಆಂಜನೇಯ ಸ್ವಾಮಿ...

ಯಲಗೂರು: ಪ್ರಖ್ಯಾತಿ ದೇವಾಲಯವಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಯಲಗೂರು ಗ್ರಾಮದ ಆಂಜನೇಯ ಸ್ವಾಮಿ ದೇಗುಲದಲ್ಲಿ ಕಳ್ಳತನ ನಡೆದಿದೆ.
ಆಂಜನೇಯ ಸ್ವಾಮಿಯ ಚಿನ್ನದ ಕಿರೀಟ, ಚಿನ್ನದ ಹಸ್ತ ಹಾಗೂ ಚಿನ್ನ ಲೇಪನದ ತೋಳ ಬಂದಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನ ನಡೆಸುತ್ತಿದ್ದು, ಈ ಸಂಬಂಧ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗರ್ಭಗುಡಿಯ ದ್ವಾರವನ್ನು ಮುರಿದು ಲಕ್ಷಾಂತರ ರುಪಾಯಿ ಬೆಲೆ ಬಾಳುವ ಚಿನ್ನವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಭದ್ರತಾ ಲೋಪದಿಂದ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


