ಜಿಲ್ಲಾ ಸುದ್ದಿ

ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಬಸ್‍ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ...

ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ
ಸರಗಳ್ಳನಿಗೆ ಸಾರ್ವಜನಿಕರಿಂದ ಗೂಸಾ (ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ಬಸ್‍ಗಾಗಿ ಕಾಯುತ್ತ ನಿಂತಿದ್ದ ಯುವತಿಯ ಸರ ಅಪಹರಿಸಲು ಯತ್ನಿಸಿದ ವ್ಯಕ್ತಿಯನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಸಿದ್ಧಾಪುರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಸಿದ್ದಾಪುರ ನಿವಾಸಿ ರಂಗನಾಥ (35) ಬಂಧಿತ. ಆರೋಪಿಯು ಅಶೋಕ ಪಿಲ್ಲರ್ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳು ಧರಿಸಿದ್ದ ಬೆಳ್ಳಿ ಸರ ದೋಚಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಕಿರುಚಿಕೊಂಡಿದ್ದು, ಸ್ಥಳದಲ್ಲಿದ್ದ ಜನರೇ ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಯನಗರ 1ನೇ ಹಂತದ ನಿವಾಸಿಯಾದ ಯುವತಿ ಕಾಲ್‍ಸೆಂಟರ್‍ನಲ್ಲಿ ಕೆಲಸ ಮಾಡುತ್ತಿದ್ದು, ಬೆಳಗ್ಗೆ ಬಸ್‍ಗಾಗಿ ಕಾಯುತ್ತಿದ್ದಾಗ ಘಟನೆ ನಡೆದಿದೆ. ಬಸ್ ನಿಲ್ದಾಣದ ಬಳಿ ಒಬ್ಬಳೇ ಇದ್ದ ಕಾರಣ ಆರೋಪಿ ಸರ ದೋಚಲು ಯತ್ನಿಸಿದ್ದಾನೆ. ಸ್ಥಳೀಯರು ತಕ್ಷಣ ಆಕೆ ನೆರವಿಗೆ ಧಾವಿಸಿದ್ದರಿಂದ ಅನಾಹುತ ಸಂಭವಿಸಿಲ್ಲ. ಆರೋಪಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೌಸ್ ಬಾಯï ಆಗಿ ಕೆಲಸ ಮಾಡುತ್ತಿದ್ದು, ಮಾನಸಿಕವಾಗಿ ಆತ ಸರಿಇಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಆತನ ಕುಟುಂಬ ಸದಸ್ಯರನ್ನು ಕರೆಸಿ ವಿಚಾರಣೆ ನಡೆಸಿ, ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.