ಬಿಬಿಎಂಪಿ ವಿಭಜನೆ ವಿರೋಧಿಸಿ ಪ್ರತಿಭಟನೆ
ಬಿಬಿಎಂಪಿ ತ್ರಿಭಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ಗುರುವಾರ ಆನಂದ್‍ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು...

ಬೆಂಗಳೂರು: ಬಿಬಿಎಂಪಿ ತ್ರಿಭಜನೆಗೆ ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಘಟಕದ ಕಾರ್ಯಕರ್ತರು ಗುರುವಾರ ಆನಂದ್‍ರಾವ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈಗಿರುವ ಬಿಬಿಎಂಪಿಯನ್ನೂ ಮೂರು ಭಾಗಗಳನ್ನಾಗಿ ವಿಂಗಡಿಸಿದಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆ. ನಗರದಲ್ಲಿ ಹೊರರಾಜ್ಯದವರೇ\ ಹೆಚ್ಚಿದ್ದಾರೆ. ವಿಭಜನೆ ಮಾಡಿದಲ್ಲಿ ತೆಲುಗು, ತಮಿಳು ಹೀಗೆ ಭಾಷಾವಾರು ವಿಂಗಡಣೆಯಾಗಿ ಅಲ್ಲಿ ಕನ್ನಡಿಗರು ಅಲ್ಪಸಂಖ್ಯಾತರಾಗಲಿದ್ದಾರೆ. ಬೇರೆಯವರ ಆಡಳಿತಕ್ಕೆ ಕನ್ನಡಿಗರು ಬಲಿಯಾಗಬೇಕಾಗುತ್ತದೆ.
ಹಾಗಾಗಿ ವಿಭಜನೆ ಮಾಡಬಾರದೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹೇಮಲತಾ, ನಗರ ಜಿಲ್ಲಾಧ್ಯಕ್ಷ ಸಹನಾ ಶೇಖರ್, ರಾಜ್ಯ ಕಾರ್ಯದರ್ಶಿ ಅಶ್ವಿನಿ, ಸುನಂದ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


