ಜಿಲ್ಲಾ ಸುದ್ದಿ

ನಗರಕ್ಕೆ ರಾಹುಲ್ ಆಗಮನ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಅಭಿಪ್ರಾಯವನ್ನು ಆಧರಿಸಿ...

ನಗರಕ್ಕೆ ರಾಹುಲ್ ಆಗಮನ
ಬೆಂಗಳೂರಿಗೆ ಗುರುವಾರ ಆಗಮಿಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಬರಮಾಡಿಕೊಂಡರು.
Published On :

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ರಾತ್ರಿ  ಬೆಂಗಳೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಅಭಿಪ್ರಾಯವನ್ನು ಆಧರಿಸಿ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ
ಮನೆಗಳಿಗೆ ಅವರು ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಲಿದೆ.

ಗುರುವಾರ ರಾತ್ರಿ 8.10ಕ್ಕೆ ರಾಹುಲ್ ಗಾಂಧಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವರಾದ ಡಿ.ಕೆ. ಶಿವಕುಮಾರ್, ಕೃಷ್ಣ ಭೈರೇಗೌಡ, ಎಸ್.ಆರ್.ಪಾಟೀಲ್ ಸೇರಿದಂತೆ ಹಲವಾರು ಸಚಿವರು, ಶಾಸಕರಾದ ಎಸ್.ಟಿ.ಸೋಮಶೇಖರ್, ಮೋಟಮ್ಮ, ರಾಣಿ ಸತೀಶ್ ಸೇರಿದಂತೆ 35ಕ್ಕೂ ಹೆಚ್ಚು ಮುಖಂಡರು ಸ್ವಾಗತಿಸಿದರು.

ಆ ಬಳಿಕ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಅವರು ಒಂದೇ ವಾಹನದಲ್ಲಿ ರಾಹುಲ್ ಗಾಂಧಿ ಅವರನ್ನು ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್‍ಗೆ ಕರೆದೊಯ್ದಿದ್ದು, ರಾತ್ರಿ ಅಲ್ಲಿಯೇ ತಂಗಿದರು. ಇಂದು ಬೆಳಗ್ಗೆ 6.30ಕ್ಕೆ ಅವರು ಆಂಧ್ರಪ್ರದೇಶಕ್ಕೆ ತೆರಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ರಾಜ್ಯದ ಗಡಿ ಭಾಗದವರೆಗೆ ಜತೆಗೆ ತೆರಳಲಿದ್ದಾರೆ.

ಭೇಟಿ ಅತಂತ್ರ: ಆದರೆ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬಂದು ರೈತರ ಮನೆಗೆ ಭೇಟಿ ನೀಡುವ ವಿಚಾರ ಇನ್ನೂ ಅತಂತ್ರವಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿಪ್ರಾಯವೇ ಅಂತಿಮವಾಗಿದೆ.

ಈ ಸಮಸ್ಯೆ ನಿರ್ವಹಣೆಗೆ ರಾಜ್ಯ ಸರ್ಕಾರವೇ ಸಮರ್ಥವಾಗಿದೆ. ನೀವು ಪ್ರವಾಸ ಮಾಡುವುದರಿಂದ ಸರ್ಕಾರದ ಘನತೆಗೆ ಚ್ಯುತಿ ಬರುತ್ತದೆ ಎಂದು ಅವರು ಮನವಿ ಮಾಡಿದರೆ ಪ್ರವಾಸ ರದ್ದಾಗಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.