ರಾಹುಲ್ ಭೇಟಿ ಖಚಿತ: ಸಿದ್ದರಾಮಯ್ಯ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸುವುದು ದೃಢಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶುಕ್ರವಾರ ಈ ವಿಚಾರವನ್ನು ಖಚಿತಪಡಿಸಿದ್ದು, ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಅವರು...

ಬೆಂಗಳೂರು: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸುವುದು ದೃಢಪಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಶುಕ್ರವಾರ ಈ ವಿಚಾರವನ್ನು ಖಚಿತಪಡಿಸಿದ್ದು, ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದರು.
ಕಲಾಪ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಸಿಎಂ, ರಾಹುಲ್ ಪ್ರವಾಸದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಬಿಬಿಎಂಪಿ ಚುನಾವಣೆಗೆ ಮೊದಲು ಅಥವಾ ನಂತರ ಅವರು ರಾಜ್ಯಕ್ಕೆ ಬರುತ್ತಾರೆ. ಈ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಆಂಧ್ರಕ್ಕೆ ಭೇಟಿ ನೀಡುವ ಮಾರ್ಗದಲ್ಲಿ ರಾಹುಲ್ ಗಾಂಧಿ ಅವರು ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ರೈತರ ಆತ್ಮಹತ್ಯೆ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ಕ್ರಮಗಳ ವಿವರಗಳನ್ನು ಈ ಸಂದರ್ಭದಲ್ಲಿ ಅವರಿಗೆ ನೀಡಲಾಗಿದೆ ಎಂದರು. ಬಿಬಿಎಂಪಿ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರ ಹೆದರಿಕೊಂಡಿಲ್ಲ. ಯಾವ ಕ್ಷಣದಲ್ಲೂ ಚುನಾವಣೆ ಎದುರಿಸುವುದಕ್ಕೆ ಸಿದ್ಧ ಮಾತ್ರವಲ್ಲ ಗೆಲುವು ಸಾಧಿಸುತ್ತೇವೆಂಬ ವಿಶ್ವಾಸವಿದೆ. ಇದಕ್ಕಾಗಿ ಎಲ್ಲ ಸಿದ್ಧತೆ ನಡೆಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


