ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ರಾಹುಲ್ ಗಾಂಧಿ ಭೇಟಿ
ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ...

ಬೆಂಗಳೂರು: ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ರಾಹುಲ್ ಗಾಂಧಿ ಅವರು ಎರಡು ದಿನಗಳ ರಾಜ್ಯ ಪ್ರವಾಸ ಮಾಡಲಿದ್ದು, ಕಾರ್ಯಕ್ರಮ ಮತ್ತು ದಿನಾಂಕಗಳನ್ನು ನಿಗದಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮಗೆ ಸೂಚನೆ ನೀಡಿದ್ದಾರೆ' ಎಂದು ಹೇಳಿದ್ದಾರೆ.
'ಎರಡು ದಿನದ ಕಾರ್ಯಕ್ರಮದ ವೇಳೆ ರಾಹುಲ್ ಗಾಂಧಿ ಅವರು ಮೃತ ರೈತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಪಾದಯಾತ್ರೆ, ಸಮಾವೇಶಗಳನ್ನು ನಡೆಸಲಿದ್ದಾರೆ ಎಂದು ಪರಮೇಶ್ವರ ಅವರು ಹೇಳಿದರು.
ಕರ್ನಾಟಕದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರಾಜ್ಯಕ್ಕೆ ಬಂದ ರಾಹುಲ್ ಗಾಂಧಿ ರೈತರನ್ನು ಭೇಟಿ ಮಾಡದೆ ವಾಪಸ್ ತೆರಳಿದ್ದರು. ಇದಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. 'ರೈತರ ಮನೆಗೆ ಭೇಟಿ ನೀಡದೆ ವಿಮಾನ ನಿಲ್ದಾಣದಿಂದ ವಾಪಸ್ ಹೋಗಿದ್ದಾರೆ' ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದರು.
ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಅವರು ಶುಕ್ರವಾರ ಬೆಳಗ್ಗೆ ಅನಂತಪುರಕ್ಕೆ ತೆರಳಿದ್ದರು. ಆದರೆ, ಕರ್ನಾಟಕದ ರೈತರ ಮನೆಗಳಿಗೆ ಭೇಟಿ ನೀಡಿರಲಿಲ್ಲ. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


