ಲೋಕಾ ಬಲೆಗೆ ಬೆಸ್ಕಾಂ ಎಂಜಿನಿಯರ್
ನೂತನವಾಗಿ ನಿರ್ಮಾಣವಾಗಿರುವ ಅಪಾರ್ಟ್ ಮೆಂಟ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ರು.2 ಲಕ್ಷ ಲಂಚ ಪಡೆದ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಜಯರಾಜ್ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ...

ಬೆಂಗಳೂರು: ನೂತನವಾಗಿ ನಿರ್ಮಾಣವಾಗಿರುವ ಅಪಾರ್ಟ್ ಮೆಂಟ್‍ಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ರು.2 ಲಕ್ಷ ಲಂಚ ಪಡೆದ ಬೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ಜಯರಾಜ್ ಎಂಬುವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಎಚ್‍ಎಸ್‍ಆರ್ ಬಡಾವಣೆ ಬೆಸ್ಕಾಂ ಕಚೇರಿಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿರುವ ಜಯರಾಜ್, ದೂರುದಾರ ಎಲೆಕ್ಟ್ರಿಕಲ್ ಗುತ್ತಿಗೆದಾರನಿಂದ ಕಚೇರಿಯಲ್ಲೇ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಚ್ ಎಸ್ಆರ್ ಬಡಾವಣೆಯಲ್ಲಿ ಅಪಾರ್ಟ್ ಮೆಂಟ್ ವೊಂದರಲ್ಲಿ 177 ಮನೆಗಳಿವೆ. ಅವುಗಳಿಗೆ ದೂರದ ವಿದ್ಯುತ್ ಪಾಯಿಂಟ್ ನಿಂತ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು. ಹತ್ತಿರದಲ್ಲಿರುವ ವಿದ್ಯುತ್ ಪಾಯಿಂಟ್ ನಿಂದ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ದೂರುದಾರರು ಜಯರಾಜ್ ಗೆ ಮನವಿ ಮಾಡಿದ್ದರು.
ಸಮೀಪದ ಪಾಯಿಂಟ್ ನಿಂದ ಸಂಪರ್ಕ ಕಲ್ಪಿಸಲು ರು.2 ಲಕ್ಷ ಲಂಚ ನೀಡಬೇಕೆಂದು ಜಯರಾಜ್ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಚ್ಛಿಸದ ದೂರುದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರಿಂದ ಪ್ರಕರಣ ದಾಖಲಾಗಿತ್ತು. ಮಂಗಳವಾರ ಸಂಜೆ ಎಚ್ಎಸ್ಆರ್ ಬಡಾವಣೆ ಬೆಸ್ಕಾಂ ಕಚೇರಿಯಲ್ಲಿ ರು.2ಲಕ್ಷ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಎಸ್ಪಿ ಸೋನಿಯಾನಾರಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಆರೋಪಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


