ಜಿಲ್ಲಾ ಸುದ್ದಿ

ಅರ್ಧ ರಾಜ್ಯದಲ್ಲಿ ಬರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈಗ ರಾಜ್ಯ ಬರಗಾಲಕ್ಕೆ ತುತ್ತಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ...

ಅರ್ಧ ರಾಜ್ಯದಲ್ಲಿ ಬರ
ಟಿ ಬಿ ಜಯಚಂದ್ರ
Published On :

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಈಗ ರಾಜ್ಯ ಬರಗಾಲಕ್ಕೆ ತುತ್ತಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಬೀಳದ ಕಾರಣ ಹಲವು ಕಡೆ ಬಿತ್ತನೆಯೇ ಆಗಿಲ್ಲ. ಇನ್ನು ಕೆಲವು ಕಡೆ ಬಿತ್ತನೆ ಆಗಿದ್ದರೂ ಆ ಬೆಳೆಗೆ ಮಳೆ ಕೊರತೆಯಿಂದಾಗಿ ಒಣಗುವ ಪರಿಸ್ಥಿತಿ ಎದುರಾಗಿದೆ. ಮುಂಗಾರು ಆರಂಭವಾಗಿ ಬಹುತೇಕ 2 ತಿಂಗಳು ಕಳೆದರೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಇನ್ನು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳು ಮಳೆಯನ್ನೇ ಕಂಡಿಲ್ಲ.

ಬಿದ್ದ ಅಲ್ಪಸ್ವಲ್ಪ ಮಳೆಯಿಂದಾಗಿ ಬಿತ್ತನೆ ಕೂಡ ಮಾಡಲು ಸಾಧ್ಯವಾಗಿಲ್ಲ. ಸದ್ಯದ ಮಾಹಿತಿ ಪ್ರಕಾರ 83 ತಾಲೂಕುಗಳ ನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರು ಸದ್ಯಕ್ಕೆ 83 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಾಗಬಹುದು. ಆಗಸ್ಟ್ ಮೊದಲ ವಾರದಲ್ಲಿ ಯಾವ ಯಾವ ತಾಲೂಕುಗಳು ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಮಳೆ ಕೊರತೆ ಉಂಟಾಗಿದೆ. ಸಾಕಷ್ಟು ಗಂಭೀರ ಪರಿಸ್ಥಿತಿ ಇದೆ. ಹೋಬಳಿವಾರು ಅಂಕಿ-ಅಂಶ ಸಂಗ್ರಹಿಸಲಾಗುತ್ತಿದೆ. ಕುಡಿಯುವ ನೀರು, ಮೇವು ಸೇರಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ ಹಣದಲ್ಲಿ ರು.84 ಕೋಟಿ ಬಿಡುಗಡೆ ಮಾಡಿದೆ. ಮುಂದಿನ ವಾರದಲ್ಲಿ ಬರ ನಿರ್ವಹಣೆ ಬಗ್ಗೆ ಕ್ರಮ ಕೈಗೊಳ್ಳಲು ಸೂಕ್ತ ನಿರ್ದೇಶನ ನೀಡಲಾಗುತ್ತದೆ ಎಂದರು. ಮಳೆ ಬಹುತೇಕ ಪ್ರದೇಶಗಳಲ್ಲಿ ಆಗಿಲ್ಲ. ಎರಡು ತಿಂಗಳಲ್ಲಿ ಮಳೆ ಎಲ್ಲೆಲ್ಲಿ ಆಗಿಲ್ಲ, ಕಡಿಮೆ ಆಗಿದೆ ಎಂಬ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈ ಬಗ್ಗೆ ಇನ್ನೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು ಆ ಸಂದರ್ಭದಲ್ಲಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಚಿವ ಜಯಚಂದ್ರ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.