ಜಿಲ್ಲಾ ಸುದ್ದಿ

ಎಂಎನ್ ರೆಡ್ಡಿಗೆ ಬಡ್ತಿ, ನೂತನ ಪೊಲೀಸ್ ಆಯುಕ್ತರಾಗಿ ಎನ್‌ಎಸ್ ಮೇಘರಿಕ್ ನೇಮಕ

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಎನ್.ಎಸ್.ಮೇಘರಿಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಗರ ಪೊಲೀಸ್ ಆಯುಕ್ತರಾಗಿದ್ದ...

ಎಂಎನ್ ರೆಡ್ಡಿಗೆ ಬಡ್ತಿ, ನೂತನ ಪೊಲೀಸ್ ಆಯುಕ್ತರಾಗಿ ಎನ್‌ಎಸ್ ಮೇಘರಿಕ್ ನೇಮಕ
ಎನ್‌ಎಸ್ ಮೇಘರಿಕ್ - ಎಂಎನ್ ರೆಡ್ಡಿ
Published On :

ಬೆಂಗಳೂರು: ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಎನ್.ಎಸ್.ಮೇಘರಿಕ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಗರ ಪೊಲೀಸ್ ಆಯುಕ್ತರಾಗಿದ್ದ ಎಂ.ಎನ್.ರೆಡ್ಡಿ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಿದೆ.

ಎಂಎನ್ ರೆಡ್ಡಿ ಅವರನ್ನು ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಡಿಜಿಪಿಯಾಗಿ ನೇಮಕ ಮಾಡಲಾಗಿದ್ದು, ಈ ಸಂಬಂಧ ಇಂದು ಸಂಜೆಯೊಳಗೆ ಸರ್ಕಾರ ಅಧಿಕೃತ ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಇದೇ ವೇಳೆ ಮೂವರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆಡಳಿತ ವಿಭಾಗದ ಡಿಜೆಪಿಯಾಗಿ ಪ್ರವೀಣ್ ಸೂದ್, ಸಿಐಡಿ ಡಿಜಿಪಿಯಾಗಿ ಕಿಶೋರ್‌ಚಂದ್ರ ಹಾಗೂ ಅಲೋಕ್ ಮೋಹನ್ ಅವರನ್ನು ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.