ರೈತರಿಗೆ ಸಾಂತ್ವನ; 20 ರಿಂದ ಬಿಜೆಪಿ ಜಿಲ್ಲಾ ರ್ಯಾಲಿ
ರೈತರಿಗೆ ಸಾಂತ್ವನ ಹೇಳಲು ಆ.20ರಿಂದ ಜಿಲ್ಲಾಮಟ್ಟದಲ್ಲಿ ಪಕ್ಷವು ರ್ಯಾಲಿ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ...

ಬೆಂಗಳೂರು: ರೈತರಿಗೆ ಸಾಂತ್ವನ ಹೇಳಲು ಆ.20ರಿಂದ ಜಿಲ್ಲಾಮಟ್ಟದಲ್ಲಿ ಪಕ್ಷವು ರ್ಯಾಲಿ ಹಮ್ಮಿಕೊಳ್ಳಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ಅವರ ಸಮಸ್ಯೆಗಳನ್ನು ಆಲಿಸಲು ರ್ಯಾಲಿ ಹಮ್ಮಿಕೊಳ್ಳಲಿದೆ. ಇದರೊಟ್ಟಿಗೆ ಈಗಾಗಲೇ ಮಂಡ್ಯ,ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲಾಗುತ್ತಿದೆ ಎಂದರು.
ಎರಡು ದಿನಗಳಿಂದ ಪಕ್ಷದ ರಾಷ್ಟ್ರೀಯ ರೈತಮೋರ್ಚಾ ಅಧ್ಯಕ್ಷ ವಿಜಯಪಾಲ್ ಸಿಂಗ್ ತೋಮರ್ ನೇತೃತ್ವದಲ್ಲಿ ರೈತರ ಸಾವಿನ ಬಗ್ಗೆ ಕಾರಣ ತಿಳಿಯುವ, ಸಾಂತ್ವನ ಹೇಳುವ ಕಾರ್ಯ ಮಾಡಲಾಗುತ್ತಿದೆ. ಮುಂದಿನ ಭಾಗವಾಗಿ ಮಠಾಧಿಪತಿಗಳನ್ನು
ಸೇರಿಸಿಕೊಂಡು ಪಕ್ಷಾತೀತವಾಗಿ ಈ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಪಂಚೇಂದ್ರಿಯಗಳನ್ನು ಕಳೆದುಕೊಂಡಿದ್ದು, ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಅಂದಾಜು 223 ಜನ ರೈತರು ಆತ್ಮಹತ್ಯೆ ಮಾಡಿಕೊಂಡರೆ ಕೇವಲ 62 ಜನರಿಗೆ ಪರಿಹಾರ ನೀಡಿದೆ. ಹೀಗಾದರೆ ಮತ್ತುಳಿದ
ರೈತರ ಗತಿಯೇನು? ರಾಜ್ಯ ಸರ್ಕಾರ ರೈತರ ಬಗ್ಗೆ ಕೇವಲ ಒಣ ಸಹಾನುಭೂತಿ ತೋರುತ್ತಿದೆ, ರೈತರಿಗೆ ಪೂರಕವಾಗಿ ಆಡಳಿತ ನಡೆಸಬೇಕೆಂದು ಸರ್ಕಾರಕ್ಕೆ ತಿಳಿದಿಲ್ಲ ಎಂದು ಟೀಕಿಸಿದರು.
ಬಿಜೆಪಿ ರಾಷ್ಟ್ರೀಯ ರೈತ ಮೋರ್ಚಾ ಅಧ್ಯಕ್ಷ ವಿಜಯಪಾಲ್‍ಸಿಂಗ್ ತೋಮರ್ ಮಾತನಾಡಿ,ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ರೈತರು ಯಾವ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನು ಅರಿಯುವ ಕಾರ್ಯ ಬಿಜೆಪಿ ಮಾಡುತ್ತಿದೆ.ಈಗಾಗಲೇ ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ರೈತರಿಗೆ ಸಾಂತ್ವನ ಹೇಳಲಾಗಿದೆ ಎಂದರು.
ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಮೂರು ಕಾರಣಗಳನ್ನು ಪ್ರಮುಖವಾಗಿ ಗುರುತಿಸಲಾಗಿದೆ. ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಇನ್ನೂ ಬಾಕಿ ಹಣ ಪಾವತಿಸದೇ ಇರುವುದು. ರೇಷ್ಮೆ ಬೆಲೆ ಕುಸಿತಗೊಂಡಿರುವುದು, ಬರಗಾಲ ಎಂದು ಅವರು ವಿಶ್ಲೇಷಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


